19.5 C
Bangalore
Wednesday, December 11, 2019

ಕಾವೇರಿ ವೆಬ್​ಸೈಟ್ ತಿರುಚಿದ ಪ್ರಕರಣಕ್ಕೆ ಮೂಲದಲ್ಲೇ ಹುಳುಕು ?

Latest News

ಪ್ರಸಾದನ ಕಲಾವಿದ ರಾಮಕೃಷ್ಣ ಕನ್ನರ್ಪಾಡಿಗೆ ಜೋಳದರಾಶಿ ದೊಡ್ಡನಗೌಡ ಪುರಸ್ಕಾರ

ಬಳ್ಳಾರಿ: ರಂಗತೋರಣ ಸಂಸ್ಥೆಯ ಸಾಂಸ್ಕೃತಿಕ ಸಾರ್ವಭೌಮ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರಕ್ಕೆ ಬೆಂಗಳೂರಿನ ಪ್ರಸಾದನ ಕಲಾವಿದ ರಾಮಕೃಷ್ಣ ಕನ್ನರ್ಪಾಡಿ ಆಯ್ಕೆಯಾಗಿದ್ದಾರೆ. ನಗರದ ರಾಘವ ಕಲಾಮಂದಿರದಲ್ಲಿ ಡಿ.28ರಂದು ಸಂಜೆ 5.45ಕ್ಕೆ...

ಡಿ.14 ರಂದು ಬೆಂಗಳೂರಿನಲ್ಲಿ ಮೀನುಗಾರರ ಸಮಾವೇಶ

ಮೈಸೂರು: ರಾಷ್ಟ್ರೀಯ ಮೀನುಗಾರರ ಸಂಘದ ವತಿಯಿಂದ ಡಿ. 14 ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಮೀನುಗಾರರ ಸ್ವಾಭಿಮಾನ ಸಮಾವೇಶ...

ಪರಸ್ಪರ ಭಾವನಾತ್ಮಕ ಸಂದೇಶ ಮೂಲಕ 2ನೇ ವಿವಾಹ ವಾರ್ಷಿಕೋತ್ಸವವನ್ನು ರಮಣೀಯವಾಗಿಸಿದ ವಿರುಷ್ಕಾ ದಂಪತಿ!

ನವದೆಹಲಿ: ತಾರಾ ದಂಪತಿಯಾದ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಂದು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ. ಈ ನೆನಪಿನ ಕ್ಷಣವನ್ನು...

ತಳೇವಾಡ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು: ಇಂದು ಮೃತ ದೇಹ ಪತ್ತೆ

ವಿಜಯಪುರ: ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಸಂಭವಿಸಿದೆ. ಸುದೀಪ (10)...

ಗ್ರಾಹಕರಿಗೆ ಸಿಹಿ ಸುದ್ದಿ: ಹೊಸ ಬೆಳೆಯ ಆಗಮನದಿಂದ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆಯಲ್ಲಿ ಇಳಿಕೆ

ನವದೆಹಲಿ: ಇತ್ತೀಚಿನ ವಾರಗಳಲ್ಲಿ ಗ್ರಾಹಕರಿಗೆ ಗಗನಕುಸುಮವಾಗಿದ್ದ ಈರುಳ್ಳಿ ಬೆಲೆಯು ಕೊಂಚ ಕೊಂಚವಾಗಿ ಇಳಿಯುವ ಲಕ್ಷಣಗಳು ಕಾಣುತ್ತಿವೆ. ರೈತರು ಹೊಸ ಬೆಳೆಯನ್ನು ಗುಜರಾತ್​ ಮತ್ತು...

ಬೆಂಗಳೂರು: ರಾಜ್ಯವ್ಯಾಪಿ ಚರ್ಚೆಗೆ ಗ್ರಾಸವಾಗಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ವೆಬ್​ಸೈಟ್ ತಿರುಚಿದ ಪ್ರಕರಣಕ್ಕೆ ಮೂಲದಲ್ಲೇ ಹುಳುಕು ಇರುವ ಆರೋಪ ಕೇಳಿಬಂದಿದೆ.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚತಂತ್ರ ಮತ್ತು ಕಾವೇರಿ ತಂತ್ರಾಂಶ ಸಂಯೋಜನೆಗೆ 2013ರ ಮಾರ್ಚ್​ನಲ್ಲಿ ಸರ್ಕಾರ ನಿರ್ಧರಿಸಿತ್ತು. ಇಲ್ಲಿಯವರೆಗೂ ಎರಡು ವೆಬ್​ಸೈಟ್​ಗಳನ್ನು ಕಾನೂನುಬದ್ಧವಾಗಿ ಸಂಯೋಜಿಸಿಲ್ಲ. ಇದು ಸಬ್ ರಿಜಿಸ್ಟ್ರಾರ್ ಕಚೇರಿ ಗಳಲ್ಲಿ ನಡೆದಿರುವ ಲೋಪ ಗಳಿಗೆ ಮೂಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ನೋಂದಣಿ ಕಾಯ್ದೆ-1908ರಡಿ ರಾಜ್ಯ ಸರ್ಕಾರ 1965ರಲ್ಲಿ ಕರ್ನಾಟಕ ನೋಂದಣಿ ನಿಯಮಾವಳಿ ರಚಿಸಲಾಗಿದೆ. ಇದರಡಿ ಆಸ್ತಿ ಮತ್ತು ಇನ್ನಿತರ ದಾಖಲೆ ನೋಂದಣಿ ನಡೆಯುತ್ತಿದೆ. ತಂತ್ರಜ್ಞಾನ ಬೆಳೆದಂತೆ ಇ-ಆಡಳಿತ ದೃಷ್ಟಿಯಿಂದ 2004ರಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಾವೇರಿ ವೆಬ್​ಸೈಟ್​ನ್ನು ಅಳವಡಿಸಿಕೊಂಡಿದೆ. ಆದರೆ, ಈ ವೆಬ್​ಸೈಟ್ ರಚಿಸುವಾಗ ಕೇಂದ್ರ ನೋಂದಣಿ ಕಾಯ್ದೆ ನಿಮಯ ಪಾಲನೆ ಮತ್ತು ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪಂಚತಂತ್ರ ಮತ್ತು ಕಾವೇರಿ ಸಂಯೋಜನೆ ಸರಿಯಾಗಿ ಮಾಡಿಲ್ಲ.

1908ರಿಂದಲೂ ಕಂದಾಯ ನಿವೇಶನಗಳ ನೋಂದಣಿ ನಡೆಯುತ್ತಿದೆ. ಇದನ್ನು ತಡೆಯಲು ಸರ್ಕಾರ ನೋಂದಣಿ ನಿಯಮಾವಳಿ 1965ಕ್ಕೆ ತಿದ್ದುಪಡಿ ತಂದು ರೆವಿನ್ಯೂ ಸೈಟ್​ಗಳ ನೋಂದಣಿಗೆ ಸಮಯ ನಿಗದಿ ಮಾಡಿ ಆ ನಂತರದ ನೋಂದಣಿ ಅಸಿಂಧು ಎಂದು ರಾಜ್ಯಪತ್ರ ಹೊರಡಿಸಬೇಕು. ಇದನ್ನು ಮಾಡದೆ ಆದೇಶ ಪತ್ರ ಹೊರಡಿಸಿ ನೋಂದಣಿಗೆ ಅವಕಾಶ ಕೊಟ್ಟಿರುವುದು ಸರಿಯಲ್ಲ.

ಕಂದಾಯ ನಿವೇಶನ ನೋಂದಣಿ ಮಾಡದೆ ಇರುವುದನ್ನು ಪ್ರಶ್ನಿಸಿ ಎನ್. ಮನು ಎಂಬುವರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶರು ವಿಚಾರಣೆ ನಡೆಸಿದಾಗ 2020ರ ಜ. 20ರೊಳಗಾಗಿ ಕಾನೂನುಬದ್ಧವಾಗಿ ಪಂಚತಂತ್ರ ಮತ್ತು ಕಾವೇರಿ ವೆಬ್​ಸೈಟ್ ಸಂಯೋಜನೆ ಮಾಡುವುದಾಗಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮುಖ್ಯಸ್ಥರು ಸೆ.4ರಂದು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಆದರೆ, ಇಲ್ಲಿಯವರೆಗೂ ಈ ನಿಟ್ಟಿನಲ್ಲಿ ಕೆಲಸವಾಗಿಲ್ಲ. ಇದನ್ನು ಮುಚ್ಚಿಡಲು ಕೆಳ ಹಂತದ ಅಧಿಕಾರಿಗಳ ಮೇಲೆ ತಪ್ಪನ್ನು ಹೊರಿಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ.

Stay connected

278,740FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...