ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯ ಆಡಲು Virat Kohli ಫಿಟ್ ಆಗಿದ್ದಾರೆಯೇ? ಫಿಟ್ನೆಸ್ ಕುರಿತು Team India ಕೋಚ್ ಹೇಳಿದ್ದಿಷ್ಟು

Virat Kohli
Published on

ಕಟಕ್​: ಇಲ್ಲಿನ ಬಾರಾಬತಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಭಾರತ ಹಾಗೂ ಇಂಗ್ಲೆಂಡ್​ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನು ಗೆದ್ದು ಸರಣಿಯನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಆತಿಥೇಯರು ತಯಾರಿ ನಡೆಸುತ್ತಿದ್ದಾರೆ. ಮೊದಲ ಪಂದ್ಯದ ಸೋಲಿನಿಂದ ಹೊರಬಂದು ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಬೇಕೆಂದು ಇಂಗ್ಲೆಂಡ್​ ತಯಾರಿ ನಡೆಸುತ್ತಿದ್ದು, ಭಾನುವಾರದ (ಫೆಬ್ರವರಿ 09) ಪಂದ್ಯದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.

ಮೊಣಕಾಲಿನ ಗಾಯದಿಂದಾಗಿ ಸರಣಿಯ ಮೊದಲ ಪಂದ್ಯ ತಪ್ಪಿಸಿಕೊಂಡಿದ್ದ ವಿರಾಟ್ ಕೊಹ್ಲಿ (Virat Kohli) ಅಭಿಮಾನಿಗಳು ಹಾಗೂ ತಂಡದ ಮ್ಯಾನೇಜ್​ಮೆಂಟ್​ಗೆ ದೊಡ್ಡ ಆತಂಕವನ್ನೇ ಉಂಟು ಮಾಡಿತ್ತು. ಇದೀಗ ವಿರಾಟ್ ಕೊಹ್ಲಿ ಫಿಟ್ ಆಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಬ್ಯಾಟಿಂಗ್​ ಕೋಚ್ ಸಿತಾಂಶು ಕೊಟಕ್​ ಮಾತನಾಡಿದ್ದಾರೆ.

ಶನಿವಾರ (ಫೆಬ್ರವರಿ 08) ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿತಾಂಶು ಕೊಟಕ್, ಗಾಯದಿಂದ ಚೇತರಿಸಿಕೊಂಡಿರುವ ವಿರಾಟ್ ಕೊಹ್ಲಿ (Virat Kohli) ಸಂಪೂರ್ಣ ಫಿಟ್​ ಆಗಿದ್ದು, ಅಭ್ಯಾಸ ನಡೆಸಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಿದ್ದಾರೆ. ವಿರಾಟ್​ಗಾಗಿ ತಂಡದಲ್ಲಿ ಯಾರು ಸ್ಥಾನ ಬಿಟ್ಟುಕೊಡಲಿದ್ಧಾರೆ ಎಂಬುದು ನನಗೆ ತಿಳಿದಿಲ್ಲ. ಇದರ ಬಗ್ಗೆ ನಾಯಕ ಹಾಗೂ ಮುಖ್ಯ ಕೋಚ್ ನಿರ್ಧರಿಸಲಿದ್ದಾರೆ ಎಂದು ಟೀಮ್​ಇಂಡಿಯಾ ಬ್ಯಾಟಿಂಗ್ ಕೋಚ್ ಸಿತಾಂಶು ಕೊಟಕ್ ತಿಳಿಸಿದ್ದಾರೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಗಾಯಕ್ಕೆ ತುತ್ತಾಗಿದ್ದ ವಿರಾಟ್​ ಕೊಹ್ಲಿ (Virat Kohli) ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಎರಡನೇ ಏಕದಿನ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ. ಚಾಂಪಿಯನ್ಸ್ ಟ್ರೋಫಿ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗುವುದರಿಂದ ಕೊಹ್ಲಿ ಎರಡನೇ ಏಕದಿನ ಪಂದ್ಯವನ್ನು ಆಡುವುದು ಅತ್ಯವಶ್ಯಕವಾಗಿದೆ. ಏಕೆಂದರೆ ಪ್ರಸ್ತುರ ರನ್ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿ ತಮ್ಮ ಫಾರ್ಮ್​ಗೆ ಮರಳಲು ಇಂಗ್ಲೆಂಡ್​ ವಿರುದ್ಧದ ಸರಣಿಯಲ್ಲಿ ಆಡುವುದು ಅತ್ಯವಶ್ಯಕವಾಗಿದೆ. ಹೀಗಾಗಿ ಉಳಿದಿರುವ ಎರಡು ಪಂದ್ಯಗಳಲ್ಲಿ ಕೊಹ್ಲಿ ಆಡುವ ಮೂಲಕ ತಮ್ಮ ಹಳೆಯ ಲಯಕ್ಕೆ ಮರಳಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ. 

ಎರಡನೇ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ತಂಡಕ್ಕೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಖಚಿತವಾಗುತ್ತಿದ್ದಂತೆ ಆಡುವ 11ರ ಬಳಗದಲ್ಲಿ ಬದಲಾವಣೆ ಖಾತ್ರಿಯಾಗಿದೆ. ಅದರಂತೆ ಏಕದಿನ ಮಾದರಿಯಲ್ಲಿ ಪದಾರ್ಪಣೆ ಮಾಡಿದ್ದ ಯಶಸ್ವಿ ಜೈಸ್ವಾಲ್​ ಕೊಹ್ಲಿಗೆ ಸ್ಥಾನ ಬಿಟ್ಟುಕೊಡುವುದು ಪಕ್ಕಾ ಎಂದು ಹೇಳಲಾಗಿದೆ. ಇನ್ನೂ ಕಳೆದ ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಶ್ರೇಯಸ್​ ಅಯ್ಯರ್​ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದು, ಜೈಸ್ವಾಲ್​ ಬದಲಿಗೆ ವಿರಾಟ್​ ಕೊಹ್ಲಿಗೆ ಅವಕಾಶ ನೀಡುವುದು ಪಕ್ಕಾ ಆಗಿದೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net