ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯಿಂದ ಹೊರಗುಳಿದ ಇಶಾನ್​ ಕಿಶನ್​

Ishan Kishan
Published on

ನವದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅತಿಥೇಯರ ವಿರುದ್ಧ ಸುಲಭ ಜಯ ಕಂಡಿದ್ದು, ಇದರ ಬೆನ್ನಲ್ಲೇ ತಂಡದಿಂದ ಮೇಜರ್​ ಅಪ್ಡೇಟ್​ ಒಂದು ಹೊರಬಿದ್ದಿದೆ.

ಲಭ್ಯವಾಗಿರುವ ಮಾಹಿತಿ ಪ್ರಕಾರ ವಿಕೆಟ್​ಕೀಪರ್​ ಬ್ಯಾಟ್ಸ್​ಮನ್​ ಇಶಾನ್​ ಕಿಶನ್​ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್​ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಇಶಾನ್​ ಅವರ ಸ್ಥಾನಕ್ಕೆ ವಿಕೆಟ್​ಕೀಪರ್​ ಬ್ಯಾಟ್ಸ್​ಮನ್​ ಕೆ.ಎಸ್. ಭರತ್​ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಸಿಸಿಐ ವೈಯಕ್ತಿಕ ಕಾರಣಗಳಿಂದಾಗಿ ದಕ್ಷಿಣ ಆಫ್ರಿಕಾದ ವಿರುದ್ಧದ ಟೆಸ್ಟ್​ ಸರಣಿಯಿಂದ ಹಿಂದೆ ಸರಿಯುತ್ತಿರುವುದಾಗಿ ಇಶಾನ್​ ಕಿಶನ್​ ತಿಳಿಸಿದ್ದು, ಅವರ ಹೆಸರನ್ನು ತಂಡದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ಧಾರೆ. ಮಂಡಳಿಯು ಅವರ ಮನವಿಯನ್ನು ಸ್ವೀಕರಿಸಿದ್ದು, ಬದಲಿ ಆಟಗಾರನಾಗಿ ಕೆ.ಎಸ್. ಭರತ್​ ಅವರನ್ನು ನೇಮಿಸಲಾಗಿದೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇಶಾನ್ ಬದಲಿಗೆ ಅನುಭವಿ ವಿಕೆಟ್ ಕೀಪರ್ ಕೆಎಸ್ ಭರತ್ ಅವರನ್ನು ಬಿಸಿಸಿಐ ತಂಡಕ್ಕೆ ಕರೆಸಿಕೊಂಡಿದೆ. ಇದಕ್ಕೂ ಮೊದಲು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭರತ್ ಕೂಡ ತಂಡದಲ್ಲಿದ್ದರು. ಆದರೆ ಹಿಂದಿನ ಪಂದ್ಯಗಳಲ್ಲಿ ಅವರ ನಿರಾಶಾದಾಯಕ ಪ್ರದರ್ಶನದ ನಂತರ ವೆಸ್ಟ್ ಇಂಡೀಸ್ ಸರಣಿಯಲ್ಲಿ ಅವರಿಗೆ ಆಡುವ ಅವಕಾಶ ನೀಡಲಿಲ್ಲ. ಸದ್ಯ ಆಫ್ರಿಕಾ ಸರಣಿಗೆ ಆಯ್ಕೆಯಾಗಿರುವ ಭರತ್​ಗೆ ತಂಡದಲ್ಲಿ ಆಡುವ ಅವಕಾಶ ಸಿಗುವ ಸಾಧ್ಯತೆ ತೀರ ಕಡಿಮೆ ಎಂದು ಹೇಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net