ಇಂದು ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ ಪ್ರದಾನ

Published on

ಪುತ್ತೂರು: ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ ಪ್ರದಾನ ಜೂ.೧ರಂದು ಸಂಜೆ ೫-೩೦ಕ್ಕೆ ಬೊಳ್ವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಲ್ತಿ) ಮಲರಾಯ ಸಪರಿವಾರ ಕ್ಷೇತ್ರದ ವಠಾರದಲ್ಲಿ ನಡೆಯಲಿದೆ. ಕೃಷ್ಣಪ್ರಕಾಶ್ ಉಳಿತ್ತಾಯ ಬರೆದ ಪಾಲೆಚ್ಚಾರು ಗೋವಿಂದ ನಾಯಕ್ ಅವರ ಕಲಾಯಾನ ಕೃತಿ ಗೋವಿಂದ ಗಾಥೆ ಅನಾವರಣಗೊಳ್ಳಲಿದೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭವನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಉದ್ಘಾಟಿಸಲಿದ್ದಾರೆ. ಕ್ಷೇತ್ರದ ಪವಿತ್ರಪಾಣಿ ಬಾಲಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಗೋವಿಂದ ಗಾಥೆ ಪುಸ್ತಕದ ಕುರಿತು ಪತ್ರಕರ್ತ ನಾ.ಕಾರಂತ ಪೆರಾಜೆ ಮಾತನಾಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net