22.5 C
Bengaluru
Sunday, January 19, 2020

ಬದಲಾಗದು ಪಾಕ್​ ಬುದ್ದಿ: ಕಾಶ್ಮೀರದಲ್ಲಿ ಪೊಲೀಸರು ಮತ್ತು ಸರಪಂಚ್​ರನ್ನು ಗುರಿಯಾಗಿಸಿ ದಾಳಿ ನಡೆಸುವಂತೆ ಐಎಸ್​ಐ ಸೂಚನೆ

Latest News

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಶಾಂತಿಯನ್ನು ಭಂಗಗೊಳಿಸುವ ಪ್ರಯತ್ನದಲ್ಲಿ ಅದರ ಭಯೋತ್ಪಾದಕ ಜಾಲವನ್ನು ಸಕ್ರಿಯಗೊಳಿಸುವಂತೆ ಪಾಕ್ ಗುಪ್ತಚರ ಇಲಾಖೆ ಐಎಸ್​ಐ, ಕಾಶ್ಮೀರದಲ್ಲಿ ಉಳಿದಿರುವ ಹಿಜ್ಬುಲ್ ಮುಜಾಹಿದ್ದೀನ್(ಎಚ್​ಎಂ) ಕಮಾಂಡರ್​ ರಿಯಾಜ್ ನೈಕೂಗೆ ಸೂಚನೆ ನೀಡಿದೆ. ಪೊಲೀಸರು ಮತ್ತು ಸರಪಂಚ್​​ರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವಂತೆ ಸೂಚಿಸಿದೆ.

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳಲ್ಲಿ ಎಚ್​ಎಂ ಸಂಘಟನೆಯ ಜಾಲ ಬಹುತೇಕ ನಾಶವಾಗಿದೆ. ಅದರ ಬಹುತೇಕ ಕಮಾಂಡರ್​ಗಳು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದು, ರಿಯಾಜ್ ನೈಕೂ ಮಾತ್ರ ಬದುಕಿ ಉಳಿದಿದ್ದಾನೆ.

ಮೂಲಗಳ ಪ್ರಕಾರ ಐಎಸ್​ಐ ಅಧಿಕಾರಿಗಳು ಮತ್ತು ಎಚ್​ಎಂ ಭಯೋತ್ಪಾದಕರು ನವೆಂಬರ್ 19 ರಂದು ಪಾಕ್ ಆಕ್ರಮಿತ ಕಾಶ್ಮೀರದ ನಿಖಿಯಾಲ್ ಸೆಕ್ಟರ್​ನಲ್ಲಿ ಸಭೆ ನಡೆಸಿದ್ದಾರೆ. ಈ ವೇಳೆ ಕಾಶ್ಮೀರದಲ್ಲಿ ನಡೆಸಬೇಕಾದ ಉಗ್ರದಾಳಿಗಳ ಬಗ್ಗೆ ಯೋಜನೆ ರೂಪಿಸಿದ್ದಾರೆ. ಲಷ್ಕರೆ ಏ ತೊಯ್ಬಾ(ಎಲ್​ಇಟಿ) ಕಮಾಂಡರ್ ಅಶ್ಫಕ್ ಬರ್ವಾಲ್, ಯೂಸುಫ್ ಕ್ವಾರಿ ಮತ್ತು ಜೈಷ್​​ ಏ ಮೊಹಮ್ಮದ್​​(ಜೆಇಎಂ) ನ ರೆಹಮಾನ್ ಖಾನ್ ಸಭೆಯಲ್ಲಿ ಹಾಜರಿದ್ದರು ಎನ್ನಲಾಗಿದೆ.

ದಾಳಿ ನಡೆಸಬೇಕಾದ ಸರಪಂಚ್​ಗಳ ಪಟ್ಟಿ ತಯಾರಿಸುವಂತೆ ಭಯೋತ್ಪಾದಕರು ಕೇಳಿದ್ದಾರೆ. ಭಾರತೀಯ ಸೇನಾಪಡೆಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸು ತ್ತಿರುವ ಜಮ್ಮು ಕಾಶ್ಮೀರ ಪೊಲೀಸರ ಪಟ್ಟಿಯನ್ನು ತಯಾರಿಸುವಂತೆ ಐಎಸ್​​ಐ ಸೂಚನೆ ನೀಡಿದೆಯಂತೆ.

ಆರ್ಟಿಕಲ್ 370 ರದ್ದು ನಂತರ ಪಾಕಿಸ್ತಾನ ಭಾರತದ ಮೇಲೆ ತೀವ್ರ ಆಕ್ರೊಶ ವ್ಯಕ್ತಪಡಿಸುತ್ತಿದೆ. ಭಾರತದ ನಿರ್ಧಾರವನ್ನು ಜಾಗತಿಕ ವೇದಿಕೆಗಳಲ್ಲಿ ಪ್ರಸ್ತಾಪಿಸಲು ಹೋಗಿ ತೀವ್ರ ಮುಖಭಂಗ ಅನುಭವಿಸುತ್ತಿದ್ದ ಪಾಕ್, ಕಣಿವೆ ರಾಜ್ಯದಲ್ಲಿ ಶಾಂತಿ ಕದಡಲು ತೀವ್ರವಾಗಿ ಯತ್ನಿಸುತ್ತಿದೆ.

ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಕಣಿವೆ ರಾಜ್ಯದಲ್ಲಿ ಸರಪಂಚ್​ ಚುನಾವಣೆ ನಡೆದಿತ್ತು. ಚುನಾವಣೆ ಬಹಿಷ್ಕರಿಸುವಂತೆ ಭಯೋತ್ಪಾದಕರು ಜನತೆಗೆ ಕರೆ ನೀಡಿದ್ದರು. ಅದಕ್ಕೆ ಕ್ಯಾರೆ ಎನ್ನದ ಕಾಶ್ಮೀರದ ಜನತೆ ಚುನಾವಣೆಯಲ್ಲಿ ಭಾಗವಹಿಸಿದ್ದರು. ಇದು ಉಗ್ರರು ಮತ್ತು ಪಾಕಿಸ್ತಾನದ ಪಿತ್ತ ನೆತ್ತಿಗೇರುವಂತೆ ಮಾಡಿದೆ. (ಏಜೆನ್ಸೀಸ್​).

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...