More

    ತೋಷಖಾನಾ ಭ್ರಷ್ಟಾಚಾರ ಪ್ರಕರಣ; ಮಾಜಿ ಪ್ರಧಾನಿ ಇಮ್ರಾನ್​ ಖಾನ್ ​ಶಿಕ್ಷೆಗೆ ತಡೆ ನೀಡಿದ ಹೈಕೋರ್ಟ್​

    ನವದೆಹಲಿ: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್​ ಖಾನ್​ ಅವರಿಗೆ ವಿಧಿಸಲಾಗಿದ್ದ ಮೂರು ವರ್ಷಗಳ ಜೈಲು ಶಿಕ್ಷೆಗೆ ಇಸ್ಲಾಮಾಬಾದ್​ ಹೈಕೋರ್ಟ್​ ತಡೆ ನೀಡಿದೆ.

    ಅರ್ಜಿ ವಿಚಾರಣೆ ನಡೆಸಿದ ಅಮೀರ್ ಫಾರೂಕ್ ಮತ್ತು ತಾರಿಕ್ ಮೆಹಮೂದ್ ಜಹಾಂಗಿರಿ ಅವರಿದ್ದ ದ್ವಿಸದಸ್ಯ ಪೀಠವು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನಂತರ ಶಿಕ್ಷೆಗೆ ತಡೆ ನೀಡಿ ತೀರ್ಪನ್ನು ಕಾಯ್ದಿರಿಸಿದೆ.

    ಇದನ್ನೂ ಓದಿ: ಕಾಂಗ್ರೆಸ್​ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ಹೊಟ್ಟೆ ಉರಿ: ರಾಮಲಿಂಗಾರೆಡ್ಡಿ

    2018-22ರ ಅವಧಿಯಲ್ಲಿ ತಮಗೆ ಬಂದಿದ್ದ ಉಡುಗೊರೆಗಳನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಿದ ಆರೋಪದ ಮೇಲೆ ಇಮ್ರಾನ್​ ಖಾನ್​ರನ್ನು ಇಸ್ಲಮಾಬಾದ್​ ವಿಚಾರಣಾ ನ್ಯಾಯಾಲಯವು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಪಡಿಸಿತ್ತು. ಮುಂದಿನ ಐದು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಿತ್ತು.

    ಅಟಾಕ್​ ಜೈಲಿನಲ್ಲಿರುವ ಇಮ್ರಾನ್​ ಖಾನ್​ ವಿದೇಶಿ ಪ್ರಜೆಗಳು ಪಾಕಿಸ್ತಾನಕ್ಕೆ ಭೇಟಿ ನೀಡಿದ ಸಮಯದಲ್ಲಿ ನೀಡಲಾಗಿದ್ದ ಉಡುಗೊರೆಗಳ ವಿವರವನ್ನು ಉದ್ಧೇಶಪೂರ್ವಕವಾಗಿ ಮರೆಮಾಚಿದ್ಧಾರೆ. ಅದನ್ನು ಮಾರಾಟ ಮಾಡಿ ಬಂದ ಆದಾಯವನ್ನು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೀಡದೆ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts