More

    ಉಗ್ರಗಾಮಿ ಸಂಘಟನೆಗಳಿಗೆ ಹಣ ಸಂದಾಯ; ಭಾರತ ವಿರುದ್ಧ ಪ್ರಬಲ ಸಾಕ್ಷ್ಯವಿದೆ: ಪಾಕಿಸ್ತಾನ ಆರೋಪ

    ನವದೆಹಲಿ: ಆರ್ಥಿಕ ಸಂಕಷ್ಟದಿಂದಾಗಿ ತೀವ್ರವಾಗಿ ಕಂಗೆಟ್ಟಿರುವ ಪಾಕಿಸ್ತಾನ ಜಾಗತಿಕ ವೇದಿಕೆಗಳಲ್ಲಿ ತೀವ್ರ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದು, ಅಲ್ಲಿನ ರಾಜಕಾರಣಿಗಳು, ಮಾಜಿ ಕ್ರಿಕೆಟಿಗರು ಹಾಗೂ ಸೇನೆ ಅಧಿಕಾರಿಗಳು ಭಾರತೀಯರಿಂದ ಆಗಿಂದಾಗೆ ಟ್ರೋಲ್​ ಆಗುತ್ತಿರುತ್ತಾರೆ.

    ಇದೀಗ ಹೊಸ ವಿಚಾರದಲ್ಲಿ ಪಾಕಿಸ್ತಾನದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸಲು ದೇಶದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗಲು ಭಾರತ ಉಗ್ರಗಾಮಿ ಸಂಘಟನೆಗಳಿಗೆ ಹಣ ಸಂದಾಯ ಮಾಡುತ್ತಿದೆ. ಇದಕ್ಕೆ ನಮ್ಮ ಬಳಿ ಸಾಕ್ಷ್ಯಧಾರಗಳಿವೆ ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವಕ್ತಾರೆ ಮುಮ್ತಾಜ್ ಜಹ್ರಾ ಬಲೂಚ್ ಆರೋಪಿಸಿದ್ದಾರೆ.

    ಇದನ್ನೂ ಓದಿ: ಪೂಂಛ್​ನಲ್ಲಿ ಉಗ್ರರ ದಾಳಿ, ಐವರು ಸೈನಿಕರು ಹುತಾತ್ಮ

    ದೇಶದಲ್ಲಿ ನಡೆದ ಭಯೋತ್ಪಾದನಾ ಚಟುವಟಿಕೆಗಳಿಗೆ ಭಾರತದ ನಂಟು, ಬೆಂಬಲ ಹಾಗೂ ಹಣಕಾಸು ನೆರವು ದೊರಕಿರುವುದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ. ಮುಂದಿನ ದಿನಗಳಲ್ಲಿ ಈ ಕುರಿತು ಮಾಧ್ಯಮಗಳಲ್ಲಿ ಹೆಚ್ಚಿನ ವಿವರ ಹಂಚಿಕೊಳ್ಳಲಾಗುವುದು. ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷಪ್ರಾಶನಕ್ಕೆ ಸಂಬಂಧಿಸಿದಂತೆ ಭಾರತದ ಮಾಧ್ಯಮಗಳಲ್ಲಿ ಬಂದಿರುವ ಸುದ್ದಿಯನ್ನು ಮುಮ್ತಾಜ್ ಅಲ್ಲಗಳೆದಿದ್ದು, ಇಂತಹ ಸುಳ್ಳು ಸುದ್ದಿಗಳಿಗೆ ಪ್ರತಿಕ್ರಿಯಿಸಲು ಆಸಕ್ತಿಯಿಲ್ಲ ಎಂದಿದ್ದಾರೆ.

    ಇತ್ತ ಪಾಕ್​ ವಿದೇಶಾಂಗ ಇಲಾಖೆಯ ವಕ್ತಾರೆ ಮುಮ್ತಾಜ್ ಜಹ್ರಾ ಬಲೂಚ್ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಟೀಕೆಗೆ ಗುರಿಯಾಗಿದೆ. ಆರ್ಥಿಕ ಸಂಕಷ್ಟದಿಂದಾಗಿ ತೀವ್ರವಾಗಿ ಕಂಗೆಟ್ಟಿರುವ ನೀವುಗಳು ಯಾವ ಆಧಾರದ ಮೇಲೆ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದೀರಾ ಎಂದು ನೆಟ್ಟಿಗರು ಕಿಡಿಕಾರಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts