ಒಂದು ಗಂಟೆಯ ಅವಧಿಯಲ್ಲಿ 120ಕ್ಕೂ ಅಧಿಕ Hezbollah ತಾಣಗಳನ್ನು ಧ್ವಂಸ ಮಾಡಿದ Israel

Air Strike
Published on

ನವದೆಹಲಿ: ಒಂದು ಗಂಟೆಯ ಅವಧಿಯಲ್ಲಿ ಇರಾನ್​ನಲ್ಲಿರುವ (Iran) ಹಿಜ್ಬುಲ್ಲಾ (Hezbollah) ಸಂಘಟನೆಯ 120ಕ್ಕೂ ಅಧಿಕ ಅಡಗುದಾಣಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್​ (Israel) ವೈಮಾನಿಕ ದಾಳಿ ನಡೆಸಿದ್ದು, ಉಭಯ ದೇಶಗಳ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿದೆ.

ದಕ್ಷಿಣ ಲೆಬನಾನ್‌ನಲ್ಲಿ ಒಂದು ಗಂಟೆಯೊಳಗೆ 120 ಕ್ಕೂ ಹೆಚ್ಚು ಭಯೋತ್ಪಾದಕರ ಅಡಗುದಾಣಗಳನ್ನು ಧ್ವಂಸ ಮಾಡಲಾಗಿದೆ. ಸೋಮವಾರ ಉಗ್ರರ ವಿರುದ್ಧ ಕೈಗೊಂಡ ವ್ಯಾಪಕ ದಾಳಿಯ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಇಸ್ರೇಲ್​ ಸೇನೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಉಗ್ರರ ವಿರುದ್ಧ ಐಎಎಫ್ (Israel Air Force) ವ್ಯಾಪಕವಾದ ವೈಮಾನಿಕ ಕಾರ್ಯಾಚರಣೆಯನ್ನು ನಡೆಸಿತು. ಈ ವೇಳೆ ದಕ್ಷಿಣ ಲೆಬನಾನ್‌ನಲ್ಲಿ ಒಂದು ಗಂಟೆಯೊಳಗೆ 120 ಕ್ಕೂ ಹೆಚ್ಚು ಭಯೋತ್ಪಾದಕರ ಅಡಗುದಾಣಗಳನ್ನು ಧ್ವಂಸ ಮಾಡಲಾಗಿದೆ. ದಾಳಿಯಲ್ಲಿ ಸಾವು ನೋವಿನ ಬಗ್ಗೆ ಯಾವುದೇ ಮಾಹಿತಿಯನ್ನು ಇಸ್ರೇಲ್​ ಹಂಚಿಕೊಂಡಿಲ್ಲ.

ಇಸ್ರೇಲ್​ ಹಾಗೂ ಇರಾನ್​ ನಡುವಿನ ಬಿಕ್ಕಟ್ಟು ದಿನ ಕಳೆದಂತೆ ಹೆಚ್ಚುತ್ತಿದ್ದು, ಶುಕ್ರವಾರ ಮಸೀದಿ ಮೇಲೆ ಇಸ್ರೇಲ್​ ನಡೆಸಿದ್ದ ವೈಮಾನಿಕ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಸ್ರೇಲ್‌ ವೈಮಾನಿಕ ದಾಳಿ ಬೆನ್ನಲ್ಲೇ ಗಾಜಾದಿಂದ ರಾಕೆಟ್‌ಗಳನ್ನು ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net