ಟೆಹ್ರಾನ್: ನಮ್ಮ ಮೇಲೆ ದಾಳಿ ಮಾಡುವ ಮೂಲಕ ಇಸ್ರೇಲ್ ಅತಿ ದೊಡ್ಡ ತಪ್ಪು ಮಾಡಿದೆ. ಈ ತಪ್ಪಿಗೆ ಶಿಕ್ಷೆ ಅನುಭವಿಸಲೇಬೇಕು ಎಂದು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ವಿಮಾನ ಅಪಘಾತ; ಘಟನೆಯಲ್ಲಿ ಬದುಕುಳಿದ ವಿಶ್ವಾಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್;ಸಹೋದರನಿಗೆ ಭಾವುಕ ವಿದಾಯ | plane-crash
ಇಂದು (18) ದೂರದರ್ಶನದಲ್ಲಿ ಮಾಡಿದ ಉದ್ರಿಕ್ತ ಭಾಷಣದಲ್ಲಿ, ಅಯತೊಲ್ಲಾ ಖಮೇನಿ ಇಸ್ರೇಲ್ ಮತ್ತು ಅಮೆರಿಕದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ದೇಶದ ವಿರುದ್ಧ ಮಿಲಿಟರಿ ಕ್ರಮ ಕೈಗೊಂಡರೆ ಭೀಕರ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಇರಾನ್ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಘೋಷಿಸಿದ ಖಮೇನಿ, ಇಸ್ರೇಲ್ ತನ್ನ ಇತ್ತೀಚಿನ ಕ್ರಮಗಳಲ್ಲಿ ಗಂಭೀರ ತಪ್ಪು ಮಾಡಿದೆ ಎಂದು ಆರೋಪಿಸಿದ್ದಾರೆ.
ಇಸ್ರೇಲ್ ಒಂದು ದೊಡ್ಡ ತಪ್ಪು ಮಾಡಿದೆ ಮತ್ತು ಅವರು ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಾವು ಅದರ ಆಡಳಿತಗಾರರಿಗೆ ಕರುಣೆ ತೋರಿಸುವುದಿಲ್ಲ ಎಂದು ಭಾಷಣದಲ್ಲಿ ಅವರು ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ: ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಭಾರತ-ಪಾಕ್ ಫೈಟ್ ಯಾವಾಗ? T20 World Cup 2026
ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಖಮೇನಿ, ಹುತಾತ್ಮರ ಬಲಿದಾನವನ್ನು ವ್ಯರ್ಥ ಮಾಡಲು ಬಿಡುವುದಿಲ್ಲ. ಇರಾನ್ ಮೇಲೆ ದಾಳಿ ಮಾಡಿದ ಇಸ್ರೇಲ್‌ಗೆ ಶಿಕ್ಷೆ ಖಚಿತ ಎಂದು ಪ್ರತಿಜ್ಞೆ ಮಾಡಿದ್ದಾರೆ. ಇಸ್ರೇಲ್‌ಗೆ ಅಮೆರಿಕ (USA) ಶಸ್ತ್ರಾಸ್ತ್ರಗಳ ನೆರವು ನೀಡಬಾರದು. ನೆರವು ನೀಡಿದ್ದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಟ್ರಂಪ್ ಅವರ ಬೇಷರತ್ತಾದ ಶರಣಾಗತಿ ಹೇಳಿಕೆ ಹಾಸ್ಯಾಸ್ಪದವಾಗಿದ್ದು ಇರಾನ್ ಯಾವುದೇ ಕಾರಣಕ್ಕೂ ಶರಣಾಗುವುದಿಲ್ಲ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ನ ಶರಣಾಗತಿಗೆ ಕರೆ ನೀಡಿದ ಕೆಲವೇ ಗಂಟೆಗಳ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ. ಖಮೇನಿ ವಾಷಿಂಗ್ಟನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದು, ಇರಾನ್ ವಿರುದ್ಧದ ಯಾವುದೇ ದಾಳಿಯು ಗಂಭೀರ ಮತ್ತು ಸರಿಪಡಿಸಲಾಗದ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಒತ್ತಿ ಹೇಳಿದ್ದಾರೆ.
(ಏಜೆನ್ಸೀಸ್)
ನನ್ನ ಜೀವನದ ಸತ್ಯಕಥೆ ಗೊತ್ತಿಲ್ಲದವರು ನನ್ನನು ವಿನಾಕಾರಣ ದೂಷಿಸಿದರು; ಪವಿತ್ರಾಗೌಡ| Pavitragowda