More

    ನಭಕ್ಕೆ ಜಿಗಿದ ಬಾಹುಬಲಿ; ಚಂದ್ರಯಾನ-3 ಉಡಾವಣೆ ಯಶಸ್ವಿ

    ಬೆಂಗಳೂರು: ಭಾರತ ಕಾತರದಿಂದ ಕಾಯುತ್ತಿರುವ ‘ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ’ಯ (ISRO) ಚಂದ್ರಯಾನ 3 ಮಿಷನ್ ಯಶಸ್ವಿಯಾಗಿ ಉಡಾವಣೆಯಾಗಿದೆ.

    ಭಾರತವು ತನ್ನ ಮೂರನೇ ಚಂದ್ರನ ಮಿಷನ್ ಅನ್ನು ಇಂದು ಮಧ್ಯಾಹ್ನ 2:35 ಪ್ರಾರಂಭಿಸಿದೆ. ಮೂರು ಹಂತದ ವಿಶೇಷ ಸಾಮರ್ಥ್ಯ ಹೊಂದಿರುವ ಬಾಹ್ಯಾಕಾಶ ನೌಕೆಯು ಚಂದ್ರನ ದಕ್ಷಿಣ ಭಾಗದ ಮೇಲ್ಮೈನಲ್ಲಿ ಸುಸೂತ್ರವಾಗಿ ಕಕ್ಷೆಗೆ ಸೇರಿದೆ.

    ಈ ಯೋಜನೆ ಯಶಸ್ವಿ ಭಾರತದ ಇತಿಹಾಸದಲ್ಲೇ ಮಹತ್ವದ ಮೈಲಿಗಲ್ಲಾಗಲಿದೆ. ಈವರೆಗೆ ಅಮೆರಿಕ, ಚೀನಾ ಮತ್ತು ರಷ್ಯಾ ಚಂದ್ರನ ಮೇಲೆ ಯಶಸ್ವಿಯಾಗಿ ಉಪಗ್ರಹವನ್ನು ಲ್ಯಾಂಡ್ ಮಾಡಿವೆ. ಇಂತಹ ಸಾಧನೆ ಮಾಡಿದ ಕೆಲವೇ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಿದೆ.

    ಬಾಹುಬಲಿ ರಾಕೆಟ್ ಎಂದು ಕರೆಯಲ್ಪಡುವ ಜಿಎಸ್‌ಎಲ್‌ವಿ ಮಾರ್ಕ್ 3 ಹೆವಿ ಲಿಫ್ಟ್ ಉಡಾವಣಾ ವಾಹನದಲ್ಲಿ ಚಂದ್ರನ ಲ್ಯಾಂಡರ್ ವಿಕ್ರಮ್ ಅನ್ನು ಕೂರಿಸಲಾಗಿದೆ. ಇದನ್ನು ಲಾಂಚ್ ವೆಹಿಕಲ್ ಮಾರ್ಕ್ 3 (LM-3) ಎಂದು ಮರುನಾಮಕರಣ ಮಾಡಲಾಗಿದ್ದು, ಈ GSLV 43.5 ಮೀಟರ್ ಎತ್ತರವಿದೆ. ಈ ಪ್ರಯಾಣವು 40 ದಿನಗಳದ್ದಾಗಿದ್ದು, ಆಗಸ್ಟ್ 23 ರಂದು ಬಾಹ್ಯಾಕಾಶ ನೌಕೆಯು ಚಂದ್ರನ ಮೇಲೆ ಸ್ಪರ್ಶಿಸುವ ನಿರೀಕ್ಷೆಯಿದೆ.

    ಭವಿಷ್ಯದ ಯೋಜನೆಗೆ ಮುನ್ನುಡಿ: ಚಂದ್ರನ ಮೇಲೆ ಬಾಹ್ಯಾಕಾಶ ನೌಕೆಯ ಸಾಫ್ಟ್ ಲ್ಯಾಂಡಿಂಗ್ ಆಗಸ್ಟ್ ಅಂತ್ಯದಲ್ಲಿ ನಡೆಯಲಿದೆ. ಇದು ಯಶಸ್ವಿಯಾದರೆ ಭವಿಷ್ಯದ ಅಂತರಗ್ರಹ ಕಾರ್ಯಾಚರಣೆಗಳಿಗೆ ಮುನ್ನುಡಿ ಬರೆಯಲಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

    ಚಂದ್ರಯಾನ-3 ಮಿಷನ್ ದೇಶೀಯ ಪೊ›ಪಲ್ಷನ್ ಮಾಡ್ಯೂಲ್, ಲ್ಯಾಂಡರ್ ಮಾಡ್ಯೂಲ್ ಮತ್ತು ರೋವರ್ ಒಳಗೊಂಡಿರುತ್ತದೆ. ಇದು ಅಂತರಗ್ರಹಗಳ ಕಾರ್ಯಾಚರಣೆಗಳಿಗೆ ಅಗತ್ಯವಾದ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿ ಪಡಿಸುವ ಮತ್ತು ಪ್ರದರ್ಶಿಸುವ ಉದ್ದೇಶವನ್ನು ಹೊಂದಿದೆ. ಎಲ್​ವಿಎಂ-3 ಉಡಾಹಕ ಚಂದ್ರಯಾನ ನೌಕೆಯನ್ನು ಜಿಯೋ ಟ್ರಾನ್ಸ್​ಫರ್ ಆರ್ಬಿಟ್​ಗೆ ತಲುಪಿಸಲಿದೆ. ಸಂಕೀರ್ಣ ಕಾರ್ಯಾಚರಣೆಗಳಿಗೆ ಎಲ್​ವಿಎಂ-3 ಉಡಾಹಕ ಬಳಕೆ ಮಾಡಲಾಗುತ್ತದೆ. ಇದು ದೇಶೀಯ ಮತ್ತು ಅಂತಾರಾಷ್ಟ್ರೀಯ ಉಪಗ್ರಹಗಳನ್ನು ಸಾಗಿಸುವ ಅತಿದೊಡ್ಡ ಮತ್ತು ಭಾರವಾದ ಉಡಾವಣಾ ವಾಹನವಾಗಿದೆ. ಚಂದ್ರನ ಭೂಪ್ರದೇಶದಲ್ಲಿ ಈ ರೋವರ್ ಪರ್ಯಟನೆ ಮಾಡಿ, ಹಲವು ಸಂಶೋಧನೆಗಳನ್ನು ನಡೆಸಲಿದೆ. ಅಲ್ಲಿನ ಮಾಹಿತಿ, ದತ್ತಾಂಶಗಳನ್ನು ಇಸ್ರೋ ನಿಯಂತ್ರಣ ಕೇಂದ್ರಕ್ಕೆ ರವಾನೆ ಮಾಡಲಿದೆ. ಒಟ್ಟಾರೆ 600 ಕೋಟಿ ರೂ.ಗೂ ಹೆಚ್ಚು ಮೊತ್ತದ ಯೋಜನೆ ಇದಾಗಿದೆ.

    ಚಂದ್ರಯಾನ-2 ಏನಾಗಿತ್ತು?: 2019ರಲ್ಲಿ ಚಂದ್ರಯಾನ-2 ಯೋಜನೆ ಕೈಗೊಳ್ಳಲಾಗಿತ್ತು. ಎಲ್ಲ ಪ್ರಕ್ರಿಯೆಗಳೂ ಸರಿಯಾಗಿಯೇ ನಡೆದಿದ್ದವು. ಆದರೆ ಚಂದ್ರನ ಮೇಲೆ ರೋವರ್ ಇಳಿಯುವ ಸಂದರ್ಭದಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ನಿಯಂತ್ರಣ ಕೇಂದ್ರದ ಜತೆ ಸಂಪರ್ಕ ಕಡಿದುಕೊಂಡು ಸಾಫ್ಟ್ ಲ್ಯಾಂಡಿಂಗ್ ಸಾಧ್ಯವಾಗಿರಲಿಲ್ಲ.

    ಚಂದ್ರಶಿಕಾರಿಗೆ ಇಸ್ರೋ ಸವಾರಿ; ಚಂದ್ರಯಾನ-3 ಶ್ರೀಹರಿಕೋಟದಿಂದ ಇಂದು ಉಡಾವಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts