ಶಾಸಕಿಯಿಂದ 94 ಸಿ ಹಕ್ಕುಪತ್ರ ವಿತರಣೆ : ಗುಂಡಡ್ಕದ 18 ಫಲಾನುಭವಿ ಕುಟುಂಬಗಳು

New Project
Published on

ಸುಳ್ಯ: ಕಂದಾಯ ಇಲಾಖೆ ವತಿಯಿಂದ 94ಸಿ ಯೋಜನೆಯ ಅರ್ಹ ಫಲಾನುವಭವಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಗುತ್ತಿಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ಕೂರು ಗ್ರಾಮದ ಗುಂಡಡ್ಕದ 18 ಕುಟುಂಬಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ಹಕ್ಕುಪತ್ರ ವಿತರಿಸಿ ಶುಭಹಾರೈಸಿದರು. ದ.ಕ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಶುಭಹಾರೈಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಗುತ್ತಿಗಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರಾ ಮೂಕಮಲೆ, ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ ಉಪಸ್ಥಿತರಿದ್ದರು. ಪಂಜ ಕಂದಾಯ ನಿರೀಕ್ಷಕ ರಂಜನ್ ಸ್ವಾಗತಿಸಿದರು. ತಹಸೀಲ್ದಾರ್ ಮಂಜುಳಾ ಎಂ. ಪ್ರಸ್ತಾವನೆಗೈದರು. ಗ್ರಾಮ ಆಡಳಿತಾಧಿಕಾರಿ ಭಾರತಿ ವಂದಿಸಿದರು. ಕೌಶಿಕ್ ಮತ್ತಿತರರು ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net