ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ

01gan1
Published on

ಕುಂದಾಪುರದ: ವಾಸ್ತವ್ಯದ ಹಕ್ಕುಪತ್ರ ಎಲ್ಲರಿಗೂ ಅಗತ್ಯವಾಗಿ ದೊರಕಬೇಕು. 94ಸಿ ಅಡಿಯಲ್ಲಿ ಅರ್ಜಿ ಹಾಕಿರುವ ಅರ್ಜಿದಾರರು ಹಕ್ಕು ಪತ್ರ ದೊರಕದೆ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಹಕ್ಕು ಪತ್ರ ಒದಗಿಸಲಾಗಿದೆ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುವಾರ ಕೊಡ್ಗಿ ಹೇಳಿದರು.

ಕುಂದಾಪುರ ತಾಲೂಕು ಪಂಚಾಯಿತಿಯ ಆಡಳಿತ ಸೌಧ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ವಾಸವಾಗಿರುವ ಫಲಾನುಭವಿಗಳಿಗೆ ಶನಿವಾರ 94ಸಿ ಅಡಿಯಲ್ಲಿ ಹಕ್ಕು ಪತ್ರ ವಿತರಿಸಿ ವಾತನಾಡಿದರು.

ಬ್ರಹ್ಮಾವರ ತಾಲೂಕು ಕೋಟ ಹೋಬಳಿಯ ಯಡ್ತಾಡಿ ಗ್ರಾಮದ ಶೀನ ನಾಯ್ಕ, ಕೋಟ ಹೋಬಳಿ ಹೆಗ್ಗುಂಜೆ ಗ್ರಾಮದ ಜಯಂತಿ ಶೆಡ್ತಿ, ಅಶೋಕ ತಿಂಗಳಾಯ, ಸುಜಾತ ಸಂತೋಷ್ ತಿಂಗಳಾಯ ಕೋಡಿ, ಅಪ್ಪಿ ಮರಕಾಲ್ತಿ ಕೋಡಿ ಅವರಿಗೆ ಹಕ್ಕು ಪತ್ರ ವಿತರಿಸಲಾಯಿತು.

ಈ ಸಂದರ್ಭ ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ ಹೆಗಡೆ, ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರುಡೇಕರ್, ಶಾಸಕರ ಆಪ್ತ ಕಾರ್ಯದರ್ಶಿ ಕೆ.ಮಹಿಮ ಶೆಟ್ಟಿ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net