ಮದ್ದೂರು: ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಸಾಶನ ಫಲಾನುಭವಿ ಬೀಜಮತಿ ಅನಾರೋಗ್ಯಕ್ಕೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಸಹಾಯಧನದ ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿ ಎಂ.ಎ.ಹಾಲಪ್ಪ ವಿತರಿಸಿದರು.
ಎಂ.ಎ.ಹಾಲಪ್ಪ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಲವಾರು ಯೋಜನೆಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ನೊಂದವರಿಗೆ ಸಹಾಯ ಹಸ್ತ ನೀಡಲಾಗುತ್ತಿದೆ. ಜತೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜ ಕಟ್ಟಕಡೆಯ ವ್ಯಕ್ತಿಗಳಿಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದರು.
ವಲಯ ಮೇಲ್ವಿಚಾರಕ ಮಂಜುನಾಥ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ತೇಜಾವತಿ ಇದ್ದರು.
