ವಿದ್ಯೆಯೆಂಬ ಸಂಪತ್ತಿನ ರಕ್ಷಣೆ ನಮ್ಮೆಲ್ಲರ ಹೊಣೆ : ಶಾಸಕ ಉವಾನಾಥ ಕೋಟ್ಯಾನ್ ಕಿವಿಮಾತು

umanath
Published on

ವಿಜಯವಾಣಿ ಸುದ್ದಿಜಾಲ ಗುರುಪುರ

ಗ್ರಾವಾಭಿವೃದ್ಧಿ ಯೋಜನೆಯಡಿ ಹಲವು ಉತ್ತಮ ಕೆಲಸಗಳು ನಡೆಯುತ್ತಿವೆ. ಇದರಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ‘ಸುಜ್ಞಾನ ನಿಧಿ’ ಶಿಷ್ಯವೇತನ ಉತ್ತಮ ಕಾರ್ಯಕ್ರಮವಾಗಿದೆ. ವಿದ್ಯೆ ಎಂಬುದು ಸಂಪತ್ತಾಗಿದ್ದು, ಅದನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಶಾಸಕ ಉವಾನಾಥ ಕೋಟ್ಯಾನ್ ಹೇಳಿದರು.

ಬಜ್ಪೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಜ್ಪೆ ಆಯೋಜಿಸಿದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಮಂಗಳೂರು ತಾಲೂಕು ವಾಜಿ ಅಧ್ಯಕ್ಷ ಭುವನಾಭಿರಾಮ ಉಡುಪ ವಾತನಾಡಿ, ಯೋಜನೆಯ ಬೆಳ್ಳಿ ಮಹೋತ್ಸವದ ಪ್ರಯುಕ್ತ ಮಕ್ಕಳು ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸುಜ್ಞಾನ ನಿಧಿ ಕಾರ್ಯಕ್ರಮ ಆರಂಭಿಸಲಾಗಿದೆ ಎಂದರು.

ಕೇಂದ್ರ ಒಕ್ಕೂಟದ ಅಧ್ಯಕ್ಷ ಹರಿಶ್ಚಂದ್ರ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಒಕ್ಕೂಟದ ನೂತನ ಅಧ್ಯಕ್ಷ ರಾಜೇಶ್ ಶೆಟ್ಟಿ, ಯೋಜನೆಯ ಮೇಲ್ವಿಚಾರಕರು, ವಿದ್ಯಾರ್ಥಿಗಳು ಮತ್ತು ಪಾಲಕರು ಉಪಸ್ಥಿತರಿದ್ದರು. ಬಜ್ಪೆಯ ಯೋಜನಾಧಿಕಾರಿ ಕರುಣಾಕರ ಆಚಾರ್ಯ ಸ್ವಾಗತಿಸಿದರು. ಮೇಲ್ವಿಚಾರಕರಾದ ಶಾಂತಿ ಮತ್ತು ನೇತ್ರಾವತಿ ನಿರೂಪಿಸಿದರು. ಅರುಣಾ ವಂದಿಸಿದರು.

1,410 ಮಂದಿಗೆ ವಿದ್ಯಾರ್ಥಿವೇತನ

ಕಾರ್ಯಕ್ರಮದಲ್ಲಿ 1,410 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರಾಗಿದೆ. ರಾಜ್ಯಾದ್ಯಂತ 40,000 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಗಿದೆ. ಶಿಕ್ಷಕರ ಕೊರತೆ ನೀಗಿಸುವ ದೃಷ್ಟಿಯಿಂದ ಜಿಲ್ಲೆಯ 141 ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರನ್ನು ನೇಮಿಸಲಾಗಿದೆ. ಜ್ಞಾನದೀಪ ಶಿಕ್ಷಕರು ಮಂಜೂರಾತಿ ಪಡೆದ ಶಾಲೆಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net