ಒಳಮೀಸಲಾತಿ ಜಾರಿಗೆ ಆದೇಶ ಹೊರಡಿಸಿ

Issue an order to implement internal reservation

ಮುಧೋಳ: ಒಳಮೀಸಲಾತಿ ವರ್ಗೀಕರಣ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸಪ್ತ ನ್ಯಾಯಾಧೀಶರ ಪೀಠ ಐತಿಹಾಸಿಕ ತೀರ್ಪು ನೀಡಿದೆ. ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಒಳಮೀಸಲಾತಿ ರಾಜ್ಯದಲ್ಲಿ ಜಾರಿಗೆ ತರದಿದ್ದರೆ ರಾಜ್ಯಾದ್ಯಂತ ಜನಾಂದೋಲನ ಮಾಡಬೇಕಾಗುತ್ತದೆ ಎಂದು ಚಿತ್ರದುರ್ಗದ ಸಂಸದ, ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲೂಕು ಪರಿಶಿಷ್ಟ ಜಾತಿ ಸಮುದಾಯಗಳ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಒಳಮೀಸಲಾತಿಗಾಗಿ ಶ್ರಮಿಸಿದ ಗಣ್ಯರ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಅಧಿಕಾರ ಇರುವ ತೆಲಂಗಾಣದಲ್ಲಿ ರಾಷ್ಟ್ರದಲ್ಲಿಯೇ ಮೊದಲು ನಾವೇ ಪ್ರಥಮ ಬಾರಿಗೆ ಜಾರಿಗೆ ತಂದದ್ದು ಎನಿಸಿಕೊಳ್ಳಲು ಒಳಮೀಸಲಾತಿ ಅನುಷ್ಠಾನಗೊಳಿಸಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕರ್ನಾಟಕದಲ್ಲೂ ಒಳಮೀಸಲಾತಿ ಜಾರಿಗೆ ತರಬೇಕು. ಇದರಿಂದ 101 ಜಾತಿಗಳ ಜನರಿಗೆ ಸಾಮಾಜಿಕ ನ್ಯಾಯ ಸಿಕ್ಕಂತಾಗುತ್ತದೆ. ಕೆಳ ಸಮುದಾಯದ ಜನರು ಸಾಮಾಜಿಕವಾಗಿ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಸದಾಶಿವ ಆಯೋಗಕ್ಕಾಗಿ ಸಾಕಷ್ಟು ಹೋರಾಟ ಮಾಡಿದ ನಂತರ ಸಮುದಾಯಗಳ ಸಮೀಕ್ಷೆಗಾಗಿ ಮೊದಲು 14 ಕೋಟಿ ರೂ. ಕೊಟ್ಟು ಸಮೀಕ್ಷೆ ಮಾಡಿಸಿದ್ದು ಅಂದಿನ ಬಿಜೆಪಿ ಸರ್ಕಾರ. ಒಳಮೀಸಲಾತಿ ಜಾರಿಗೆ ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆದಾಗ ಇದಕ್ಕೊಂದು ತಾರ್ಕಿಕ ಅಂತ್ಯ ದೊರಕಬೇಕು ಎಂದು ಆರ್‌ಎಸ್‌ಎಸ್ ಪ್ರಮುಖ ಮುಖಂಡರಾದ ಮೋಹನ್ ಭಾಗವತ್, ಮುಕುಂದ, ವಾದಿರಾಜ ಹಾಗೂ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಬಯಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಹೈದರಾಬಾದ್‌ನಲ್ಲಿ ನಡೆದ ಹೋರಾಟದ ಸಭೆಯಲ್ಲಿ ಮೂವತ್ತು ವರ್ಷದ ಹೋರಾಟಕ್ಕೆ ನನ್ನ ಬೆಂಬಲವಿದೆ. ಮುಂದೆ ನಿಮಗೆ ನ್ಯಾಯ ಸಿಗುವವರೆಗೆ ನಾನೂ ನಿಮ್ಮ ಜೊತೆಗೆ ಹೋರಾಟಗಾರನಾಗಿ ಇರುತ್ತೇನೆ. ಒಳಮೀಸಲಾತಿ ಜಾರಿಯಾಗಲು ಸ್ವತಃ ಮುಂದೆ ಬಂದು ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳುವ ಮೂಲಕ ನಮ್ಮ ಹೋರಾಟಕ್ಕೆ ಬಲ ತುಂಬಿದ್ದರು. ಕರ್ನಾಟಕದಲ್ಲಿ ಕೆಳ ಸಮುದಾಯವರಿಗೆ ನ್ಯಾಯ ಕೊಡಿಸುವಲ್ಲಿ ಹಿಂದಿನ ಬಿಜೆಪಿ ಸರ್ಕಾರ ಸಾಕಷ್ಟು ಕಷ್ಟಪಟ್ಟಿದೆ ಎಂದು ಹೇಳಿದರು.

ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ಹೋರಾಟಗಾರ ಮುತ್ತಣ್ಣ ಬೆಣ್ಣೂರ, ಮೀಸಲಾತಿ ಇತಿಹಾಸ ಕುರಿತು ಉಪನ್ಯಾಸ ನೀಡಿದರು. ಮಾದಿಗ ಮಹಾಸಭಾ ತಾಲೂಕು ಅಧ್ಯಕ್ಷ ಸುನೀಲ ಕಂಬೋಗಿ ಮಾತನಾಡಿದರು. ತೇರದಾಳ ಶಾಸಕ ಸಿದ್ದು ಸವದಿ, ಸಮಾಜದ ಮುಖಂಡರಾದ ಕೃಷ್ಣಾ ಮಾದರ, ಶಿವಾನಂದ ಟವಳಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಕರಬಸಯ್ಯ ಹಿರೇಮಠ, ವಿವೇಕಾನಂದಗೌಡ ಪಾಟೀಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನಾರಾಯಣ ಯಡಹಳ್ಳಿ, ಅರುಣ ಕಾರಜೋಳ, ಲೋಕಣ್ಣ ಕತ್ತಿ, ಶಂಕರ ನಾಯಿಕ, ವನಜಾಕ್ಷಿ ಮಂಟೂರ, ಸಿದ್ದು ಪಾಟೀಲ, ಸುನೀಲ ಕಂಬೋಗಿ ಇತರರು ಇದ್ದರು.

ಸಂಸದರ ಸವಾಲು

ಜಾತಿ ಮೀಸಲಾತಿ ಹಾಗೂ ಒಳಮೀಸಲಾತಿಯಲ್ಲಿ ಬಿಜೆಪಿ ಹಾಗೂ ಸರ್ಕಾರ ಏನು ಮಾಡಿದೆ ಎನ್ನುವುದನ್ನು ವಿವರಿಸಿದ ಸಂಸದ ಕಾರಜೋಳ, ಕರ್ನಾಟಕ ಗೆಜೆಟ್ ಪತ್ರಿಕೆ ಹಾಗೂ ಕಡತಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿದರು. ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ಹಾಗೂ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಏನು ಮಾಡಿದ್ದಾರೆ ಎಂದು ದಾಖಲೆ ಕೊಡಲಿ ಎಂದು ಸವಾಲು ಹಾಕಿದರು. ಕೋಟ್

ಜಗತ್ತಿನಲ್ಲಿ ಮತ್ತೋರ್ವ ಅಂಬೇಡ್ಕರ್ ಹುಟ್ಟಲು ಸಾಧ್ಯವಿಲ್ಲ. ನನ್ನನ್ನು ಸೇರಿಸಿ ಯಾರನ್ನೂ, ಯಾವುದೇ ಕಾರಣಕ್ಕೂ ಡಾ.ಅಂಬೇಡ್ಕರ್ ಅವರಿಗೆ ಹೋಲಿಸಬೇಡಿ. ವಿಶ್ವಜ್ಯೋತಿ ಬಸವಣ್ಣನ ನಂತರ ಸಾಮಾಜಿಕ ನ್ಯಾಯ ಕೊಡಲು ಹುಟ್ಟಿ ಬಂದ ಮಹಾನ್ ಶಕ್ತಿ ಡಾ.ಅಂಬೇಡ್ಕರ್. ಅವರ ತತ್ವಾದರ್ಶ ಅಳವಡಿಸಿಕೊಂಡು ಹೋಗಬಹುದು. ಹೊರತು ಮತ್ತೋರ್ವ ಅಂಬೇಡ್ಕರ್ ಆಗಲು ಸಾಧ್ಯವಿಲ್ಲ.
ಗೋವಿಂದ ಕಾರಜೋಳ, ಚಿತ್ರದುರ್ಗ ಸಂಸದ 
Share This Article

ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …

 ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…