ಭಾರತ ಚಾಂಪಿಯನ್ಸ್​ ಟ್ರೋಫಿಯಲ್ಲಿ ಆಡಿದ್ರೆಷ್ಟು, ಬಿಟ್ಟರೆಷ್ಟು ನಮಗೆ…ಸೊಕ್ಕಿನ ಹೇಳಿಕೆ ಕೊಟ್ಟ ಪಾಕ್​ ಮಾಜಿ ಆಟಗಾರ

Saqlain Mushtaq

ನವದೆಹಲಿ: ಚಾಂಪಿಯನ್ಸ್​ ಟ್ರೋಫಿ ಆರಂಭವಾಗುವುದಕ್ಕೆ ತಿಂಗಳುಗಳು ಉಳಿದಿದ್ದು, ಭಾರತ ಹಾಗೂ ಪಾಕಿಸ್ತಾನ ನಡುವಿನ ಕಿತ್ತಾಟಕ್ಕೆ ಸಖತ್​ ಸೌಂಡ್​ ಮಾಡುತ್ತಿದೆ. ಏಕೆಂದರ ಈ ಬಾರಿಯ ಟೂರ್ನಿಯು ಹಾಲಿ ಚಾಂಪಿಯನ್ಸ್​ ಪಾಕಿಸ್ತಾನದ ನೆಲದಲ್ಲಿ ನಡೆಯುತ್ತಿದ್ದು, ಭದ್ರತೆಯ ಕಾರಣದಿಂದಾಗಿ ಭಾರತ ಭಾಗಿಯಾಗುವುದಿಲ್ಲ ಎಂದು ಹೇಳಿದೆ. ಹೈಬ್ರಿಡ್​ ಮಾದರಿಯಲ್ಲಿ ಟೂರ್ನಿ ನಡೆಸಿದರೆ ಮಾತ್ರ ಭಾಗಿಯಾಗುವುದಾಗಿ ಹೇಳಿರುವ ಬಿಸಿಸಿಐ ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಎಂದು ಕಡ್ಡಿ ಮುರಿದಂತೆ ಹೇಳಿದೆ. ಐಸಿಸಿ ಕೂಡ ಬಿಸಿಸಿಐ ಬೆನ್ನಿಗೆ ನಿಂತಿದ್ದು, ಪಾಕಿಸ್ತಾನದ ಮಾತ್ರ ಹೈಬ್ರಿಡ್​ ಮಾದರಿಯಲ್ಲಿ ನಡೆಸಲು ತಯಾರಿಲ್ಲ ಎಂದು ತನ್ನ ನಿಲುವನ್ನು ತಿಳಿಸಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಕಿತ್ತಾಟಕ್ಕೆ ಹೆಚ್ಚು ಸದ್ದು ಮಾಡುತ್ತಿರುವ ಚಾಂಪಿಯನ್ಸ್​ ಟ್ರೋಫಿ ವಿಚಾರಕ್ಕೆ ಸಂಬಂಧಿಸಿದಂತೆ ಅಲ್ಲಿನ ಮಾಜಿ ಆಟಗಾರರು ನೀಡುತ್ತಿರುವ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತಿದ್ದು, ಭಾರತವನ್ನು ಮತ್ತಷ್ಟು ಕೆರಳಿಸುತ್ತಿದೆ. ಈಗಾಗಲೇ ಆರ್ಥಿಕ ಸಂಕಷ್ಟದಿಂದ ನಲುಗಿ ಪ್ರಪಂಚದಾದ್ಯಂತ ಭಿಕ್ಷೆ ಬೇಡುತ್ತಿದ್ದರು ಇವರ ಸೊಕ್ಕಿಗೇನು ಕಡಿಮೆ ಇಲ್ಲ ಎಂದು ಭಾರತದ ಅಭಿಮಾನಿಗಳು ಕಿಡಿಕಾರಿದ್ದಾರೆ. ಇದೀಗ ಪಾಕ್​ ಕ್ರಿಕೆಟ್​ ತಂಡದ ಮಾಜಿ ಸಕ್ಲೇನ್ ಮುಷ್ತಾಕ್ ನೀಡಿರುವ ಹೇಳಿಕೆ ಮತ್ತಷ್ಟು ಕೆರಳಿಸಿದೆ.

ಖಾಸಗಿ ಸುದ್ದಿ ವಾಹಿನಿಯಲ್ಲಿ ಈ ಕುರಿತು ಮಾತನಾಡಿದ ಮುಷ್ತಾಕ್​, ಅವರು ಆಡಲು ಬಯಸಿದರೆ ಇಲ್ಲಿಗೆ ಬರಬಹುದು. ಇಲ್ಲವಾದರೆ ಪರವಾಗಿಲ್ಲ. ಅದು ಬಿಟ್ಟು ಈ ವಿಚಾರವಾಗಿ ಹೆಚ್ಚು ಚರ್ಚಿಸುವುದಕ್ಕೆ ಅರ್ಥವಿಲ್ಲ. ಇದರಿಂದಾಗಿ ಎರಡು ದೇಶಗಳಿಗೆ ಒಳ್ಳೆಯದ್ದು ಅಥವಾ ಕೆಟ್ಟದಾಗುವುದಿಲ್ಲ. ಇದು ಐಸಿಸಿಯ ಈವೆಂಟ್​ ಆಗಿದ್ದು, ಭಾರತ ಭಾಗವಹಿಸುವುದರ ಬಗ್ಗೆ ಐಸಿಸಿಯೇ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

ಆರ್ಥಿಕ ಸಂಕಷ್ಟದ ಭಯ

ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದೆ. ಕ್ರಿಕೆಟ್​ನಲ್ಲಿ ಟೀಮ್​ ಇಂಡಿಯಾಗೆ ಇರುವ ಕ್ರೇಜ್​ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್​ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್​ ಮೇಲೆ ಇರುವ ಕಳಂಕವೂ ದೂರವಾಗಲಿದೆ. ಅಲ್ಲದೆ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ. ಆದರೆ, ಪಿಸಿಬಿ ನಿರೀಕ್ಷೆಗೆ ಬಿಸಿಸಿಐ ಆಘಾತ ನೀಡಿದ್ದು, ಬಹುತೇಕ ಟೀಮ್​ ಇಂಡಿಯಾ ಪಾಕಿಸ್ತಾನ ತೆರಳುವುದು ಅನುಮಾನವಾಗಿದೆ.

ಇದಲ್ಲದೆ ಭದ್ರತೆಯ ಕಾರಣದಿಂದಾಗಿ ಭಾರತದ ಪಂದ್ಯಗಳನ್ನು ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಸುವುದಾಗಿ ತಿಳಿಸಿದ್ದು, ಇದಕ್ಕಾಗಿ ಕ್ರೀಡಾಂಗಣದ ಪಕ್ಕದಲ್ಲಿರುವ ಐದು ಎಕರೆ ಜಮೀನನ್ನು ಸ್ವಾದೀನಪಡಿಸಿಕೊಳ್ಳಲಾಗಿದ್ದು, ಭಾರತದ ಆಟಗಾರರು ಹಾಗೂ ಸಿಬ್ಬಂದಿ ಉಳಿದುಕೊಳ್ಳಲು 5 ಸ್ಟಾರ್​ ಹೋಟೆಲ್​ ನಿರ್ಮಿಸುವುದಾಗಿ ತಿಳಿಸಿದೆ. ಇದಲ್ಲದೆ ಭಾರತ ತಂಡ ಪಾಕಿಸ್ತಾನಕ್ಕೆ ಬರುವುದರಿಂದ ಉಭೈ ದೇಶಗಳ ನಡುವಿನ ಸಂಬಂಧ ಸ್ವಲ್ಪಮಟ್ಟಿಗೆ ಸರಿಹೋಗಬಹುದು ಎಂದು ಪಿಸಿಬಿ ಆಶಿಸಿದೆ.

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…