ಐ ಲವ್ ಯು ಚಿನ್ನ…ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅಗಲಿ ಇಂದಿಗೆ ಒಂದು ವರ್ಷ

ಬೆಂಗಳೂರು:  ಸ್ಯಾಂಡಲ್​ವುಡ್​ ನಟ ವಿಜಯ್​ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರು ಸಾವನ್ನಪ್ಪಿ ಸರಿಸುಮಾರು ಒಂದು ವರ್ಷವೇ ಕಳೆದಿದೆ. ಕಳೆದ ವರ್ಷ ಹೃದಯಾಘಾತದಿಂದ ನಿಧನರಾಗಿದ್ದ  ಪತ್ನಿಯನ್ನು ನೆನೆದು ವಿಜಯ್​ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​​ ಮಾಡಿದ್ದಾರೆ.

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅಗಲಿ ಒಂದು ವರ್ಷ ಕಳೆದಿದೆ.  ಪತ್ನಿ ನೆನೆದು ಭಾವುಕ ಪೋಸ್ಟ್ ಶೇರ್ ಮಾಡಿದ ವಿಜಯ್ ರಾಘವೇಂದ್ರ ಐ ಲವ್ ಯು ಚಿನ್ನ ..ಮೌನದಲಿ ಅರಳಿದ ನಗು ನಿನ್ನದು.. ನೀ ನಡೆದ ಹಾಡಿಯ ನೆನಪಿನ ಬೆಳಕು ನನ್ನದು ಎಂದು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಶೇರ್ ಮಾಡಿದ ವಿಜಯ್ ರಾಘವೇಂದ್ರ ಪೋಸ್ಟ್​​ ಮಾಡಿದ್ದಾರೆ.

ಐ ಲವ್ ಯು ಚಿನ್ನ...ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅಗಲಿ ಇಂದಿಗೆ ಒಂದು ವರ್ಷ

ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಮ್ ಅವರ ಪುತ್ರಿ. ವಿಜಯ್ ರಾಘವೇಂದ್ರ ಮತ್ತು ಸ್ಪಂದನಾ ಅವರು 2007ರ ಆಗಸ್ಟ್ 26ರಂದು ಮದುವೆ ಆಗಿದ್ದರು. ಈ ದಂಪತಿಗೆ ಶೌರ್ಯ ಹೆಸರಿನ ಮಗ ಇದ್ದಾನೆ.

View this post on Instagram

A post shared by Vijay Raghavendra (@raagu.vijay)

ಕಳೆದ ವರ್ಷ ಬ್ಯಾಂಕಾಕ್ ಪ್ರವಾಸದಲ್ಲಿದ್ದ ವೇಳೆ ಸ್ಪಂದನಾ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡುವ ಪ್ರಯತ್ನ ಮಾಡಲಾಯಿತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದರು. ಅವರ ಪಾರ್ಥಿವ ಶರೀರವನ್ನು ಆ.8 ರಂದು ಬೆಂಗಳೂರಿಗೆ ತರುವುದಕ್ಕೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಸ್ಪಂದನಾ ಅವರ ನಿಧನ ದೊಡ್ಡ ಆಘಾತವನ್ನು ಉಂಟು ಮಾಡಿತ್ತು.

Share This Article

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಪ್ರತಿದಿನ ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತೀರಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ…

ಕೆಲವರು ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತಾರೆ. ಈ ರೀತಿ ಕುಡಿಯುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು…