

ಬ್ರಹ್ಮಾವರ: ಪ್ರತಿ ಒಬ್ಬರೂ ಬ್ಯಾಂಕ್‌ನೊಂದಿಗೆ ಸಂಪರ್ಕ ಇರಿಸಿಕೊಂಡು ಬ್ಯಾಂಕ್ ಮೂಲಕ ವ್ಯವಹಾರ ಮಾಡುವುದು ಉತ್ತಮ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಬ್ರಹ್ಮಾವರ ಶಾಖೆಯ ವ್ಯವಸ್ಥಾಪಕ ವರದರಾಜ್ ಶೆಟ್ಟಿ ಹೇಳಿದರು.
ಸೋಮವಾರ ವಾರಂಬಳ್ಳಿ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ನಾನಾ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ನಮ್ಮ ಬ್ಯಾಂಕ್ ಹಿರಿಯ ನಾಗರಿಕರಿಗೆ ಮತ್ತು ಠೇವಣಿದಾರರಿಗೆ ಉತ್ತಮ ಸೇವೆ ನೀಡುವುದಲ್ಲದೆ ತ್ವರಿತಸಾಲಗಳನ್ನು ಕೂಡಾ ನೀಡಲಾಗುವುದು ಪ್ರಧಾನ ಮಂತ್ರಿ ಜೀವನ್ ಜ್ಯೋತಿ, ಸುರಕ್ಷಾ ಭೀಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳ ಪ್ರಯೋಜನ ಪಡೆಯಿರಿ ಇನ್ನು ಕೆಲವೆ ದಿನದಲ್ಲಿ ಫೋನ್ ಪೇ ಸೌಲಭ್ಯ ಕೂಡಾ ಲಭ್ಯವಾಗಲಿದೆ ಎಂದರು.
ವಾರಂಬಳ್ಳಿ ಗ್ರಾಪಂ ಅಧ್ಯಕ್ಷ ನಿತ್ಯಾನಂದ ಬಿ.ಆರ್.ಬ್ಯಾಂಕ್‌ನ ಯೋಜನೆಗಳ ಮಾಹಿತಿ ಪತ್ರ ಬಿಡುಗಡೆ ಮಾಡಿದರು. ಉಪಾಧ್ಯಕ್ಷೆ ಉಮಾಬಾಯಿ, ಕಾರ್ಯದರ್ಶಿ ಶೇಖರ ನಾಯ್ಕ, ಬ್ಯಾಂಕ್ ಸಿಬ್ಬಂದಿ ಉಪಸ್ಥಿತರಿದ್ದರು.
ಗ್ರಾಪಂ ಸದಸ್ಯೆ ದೇವಕಿ ಅನಿಸಿಕೆ ವ್ಯಕ್ತಪಡಿಸಿದರು. ಗ್ರಾಪಂ ವ್ಯಾಪ್ತಿಯ ನಾನಾ ಭಾಗದ ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷರು ಪಧಾಧಿಕಾರಿಗಳು ಉಪಸ್ಥಿತರಿದ್ದರು. ಬ್ಯಾಂಕ್ ಸಿಬ್ಬಂದಿ ಅಕ್ಷತಾ ಪ್ರಾರ್ಥಿಸಿದರು. ಉಮೇಶ್ ದೇವಾಡಿಗ ಸ್ವಾಗತಿಸಿದರು. ರವಿ ಕೆ. ವಂದಿಸಿ, ಉಷಾ ಶೆಟ್ಟಿ ನಿರೂಪಿಸಿದರು.