More

    ಕಡ್ಡಾಯವಾಗಿ ಮತ ಚಲಾಯಿಸಬೇಕು

    ಮೈಸೂರು: ಮತದಾರರು ಮತದಾನ ಪ್ರಾಮುಖ್ಯತೆಯನ್ನು ತಿಳಿದು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಸ್ವೀಪ್ ಸಮಿತಿಯ ಸಹಾಯಕ ನೋಡಲ್ ಅಧಿಕಾರಿ ಎಂ.ಶಾಂತ ಹೇಳಿದರು.

    ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಭಾನುವಾರ ತಾಲೂಕು ಮಟ್ಟದ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸ್ವೀಪ್ ಸಮಿತಿಯು ದೇಶದಾದ್ಯಂತ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಹಾಗೂ ಮಾಹಿತಿಯನ್ನು ನೀಡುವ ಕೆಲಸ ಮಾಡುತ್ತಿದೆ. ಇದರಿಂದಾಗಿ ಇಂದು 97 ಕೋಟಿ ಜನರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದರು.

    ಗ್ರಾಮೀಣ, ನಗರ ಪ್ರದೇಶದಲ್ಲಿನ ಯುವಕರು ಹಾಗೂ ಮತದಾರರಲ್ಲಿ ಚುನಾವಣಾ ಸಾಕ್ಷಾರತೆ ಮೂಡಿಸಬೇಕು. ಯಾವುದೇ ಮತದಾರರು ಆಸೆ ಆಮಿಷಗಳಿಗೆ ಒಳಗಾಗದೆ ಸ್ವಯಂ ನಿರ್ಣಯ ಕೈಗೊಂಡು ಉತ್ತಮ ನಾಯಕನನ್ನು ಆಯ್ಕೆ ಮಾಡಲು ನೈತಿಕ ಮತದಾನ ಮಾಡಲು ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು.

    ವಿದ್ಯಾರ್ಥಿಗಳಿಗೆ, ಸಂಚಾಲಕರಿಗೆ ವಿವಿಧ ಚಟುವಟಿಕೆಗಳ ಮೂಲಕ ಚುನಾವಣೆಯ ಬಗ್ಗೆ ಮನದಟ್ಟಾಗುವಂತೆ ತರಬೇತಿ ನೀಡಬೇಕು. ಸಮುದಾಯದ ರಾಯಭಾರಿಗಳು ತಮ್ಮ ವ್ಯಾಪ್ತಿಗೆ ಬರುವ ಮತದಾದರಿಗೆ ಮತದಾನದ ಬಗ್ಗೆ ವಿಸ್ತೃತವಾಗಿ ಜಾಗೃತಿ ಮೂಡಿಸಿ, ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts