ಪ್ರಜ್ವಲ್ ಗೆಲ್ಲಿಸುವುದು ಕಾಂಗ್ರೆಸ್ ಕರ್ತವ್ಯ

ಚನ್ನರಾಯಪಟ್ಟಣ: ಹಾಸನ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಸ್ವರ್ಧಿಸಿರುವ ಪ್ರಜ್ವಲ್ ರೇವಣ್ಣ ಅವರನ್ನು ಗೆಲ್ಲಿಸುವುದು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಕರ್ತವ್ಯ ಎಂದು ಶಾಸಕ ಎಂ.ಎ.ಗೋಪಾಲಸ್ವಾಮಿ ಹೇಳಿದರು.

ತಾಲೂಕಿನ ಹಿರೀಸಾವೆಯ ಶ್ರೀ ಚೌಡೇಶ್ವರಿ ಸಮುದಾಯ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದವರು ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಕೇಳುತ್ತಿದ್ದಾರೆ. ಅಂತೆಯೇ ಇಲ್ಲಿ ನಾವು ಸಹ ಕೆಲಸ ಮಾಡಬೇಕು ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಂಜುನಾಥ್ ಮಾತನಾಡಿ, ಸಮಿಶ್ರ ಸರ್ಕಾರದಲ್ಲಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರನ್ನು ಜಿಲ್ಲೆಯ ಸಚಿವರು ಮತ್ತು ಶಾಸಕರು ಕಡಗಣಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ವಾರದೊಳಗಾಗಿ ಸಚಿವರು, ಶಾಸಕರು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.

ಬಾಕ್ಲ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ಮಂಜೇಗೌಡ, ಎಪಿಎಂಸಿ ನಿರ್ದೇಶಕ ಎಂ.ಶಂಕರ್, ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ, ತಾಲೂಕು ಪಂಚಾಯಿತಿ ಅಧ್ಯಕ್ಷೆ ರಂಜಿತಾ ನಿಂಗೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಉದಯಕುಮಾರ್, ಕಾಂಗ್ರೆಸ್ ಮುಖಂಡರಾದ ಪೂಮಡಿಹಳ್ಳಿ ನಾಗರಾಜ್, ಶಂಕರೇಗೌಡ, ಬಿ.ಸಿ. ಬೊಮ್ಮೇಗೌಡ, ತಾಪಂ ಸದಸ್ಯೆರಾದ ಶ್ಯಾಮಲಾ ಉದಯಕುಮಾರ್, ಪ್ರಮಿಳಾ ಪ್ರಕಾಶ್, ಯುವರಾಜ್ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *