

ಹೆಬ್ರಿ: ಅಂತರ್ಜಲ ವೃದ್ಧಿಯಾದರೆ ಬದುಕು ಹಸನಾಗುತ್ತದೆ. ಪ್ರಾಣಿ ಪಕ್ಷಿಗಳಿಗೆ ಜೀವಸಂಕುಲಗಳಿಗೆ ನೀರು ಅತ್ಯಂತ ಅಗತ್ಯವಾಗಿದ್ದು ಅದನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಉಡುಪಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಹೇಳಿದರು.
ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆ ಹೆಬ್ರಿ ತಾಲೂಕು, ಅಜೆಕಾರು ವಲಯದ ಅಮೃತ ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ವಾತನಾಡಿದರು.
ಮುನಿಯಾಲು ಉದಯ್ ಕುವಾರ್ ಶೆಟ್ಟಿ ವಾತನಾಡಿ, ಕೆರೆಗಳ ಸಂರಕ್ಷಣೆ ಅತ್ಯಂತ ಅಗತ್ಯ ಅದನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರದು ಎಂದರು.
ಗ್ರಾಪಂ ಅಧ್ಯಕ್ಷೆ ಪ್ರಭಾವತಿ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅರುಣ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಗ್ರಾಪಂ ಸದಸ್ಯ ರಾಜೇಶ್ ಶೆಟ್ಟಿ, ಪ್ರಮುಖರಾದ ಹಾಜಿ ಸಾಹೇಬ್, ಶಾಂತಿರಾಜ್ ಜೈನ್, ನಂದಕುವಾರ್ ಹೆಗ್ಡೆ, ಯಶೋದಾ ಶೆಟ್ಟಿ, ಜಗದೀಶ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಸುಕೇಶ್ ಶೆಟ್ಟಿ, ಜಯಪಾಲ್ ಹೆಗಡೆ, ರುರಾಮ್ ಶೆಟ್ಟಿ, ತಾಲೂಕು ಯೋಜನಾಧಿಕಾರಿ ಲೀಲಾವತಿ, ಒಕ್ಕೂಟ ಅಧ್ಯಕ್ಷ ಪ್ರವೀಣ್, ವಲಯ ಮೇಲ್ವಿಚಾರಕಿ ನಿಶ್ಮಿತಾ, ಕೃಷಿ ಮೇಲ್ವಿಚಾರಕ ಉಮೇಶ್, ಒಕ್ಕೂಟದ ಪದಾಧಿಕಾರಿಗಳು, ಕೆರೆ ಸಮಿತಿ ಪದಾಧಿಕಾರಿಗಳು, ಶೌರ್ಯ ವಿಪತ್ತು ಟಕ ಸದಸ್ಯರು, ವಲಯ ಸೇವಾ ಪ್ರತಿನಿಧಿಗಳು ಹಾಗೂ ಸದಸ್ಯರು ಹಾಜರಿದ್ದರು.