

ವಿಜಯವಾಣಿ ಸುದ್ದಿಜಾಲ ಗೋಳಿಯಂಗಡಿ
ವಿದ್ಯಾರ್ಥಿ ಸರ್ಕಾರವು ಶಾಲೆಯಲ್ಲಿ ಶಿಸ್ತು, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳುವಲ್ಲಿ ಪೂರಕವಾಗಲಿದೆ. ವಿದ್ಯಾರ್ಥಿಗಳು ಉತ್ತಮ ಗುಣಗಳನ್ನು ಹೊಂದಿ ಕಲಿಕೆಗೆ ಆದ್ಯತೆ ನೀಡುವುದರೊಂದಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಗೋಳಿಯಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಾಗರಾಜ ವೈದ್ಯ ಹೇಳಿದರು.
ಗೋಳಿಯಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾ ವಿದ್ಯಾರ್ಥಿ ಸಂಸತ್ತು ಹಾಗೂ ವಿವಿಧ ಸಂಘಗಳನ್ನು ಉದ್ಘಾಟಿಸಿ ಬುಧವಾರ ಮಾತನಾಡಿದರು.
ಗೋಳಿಯಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಮುಖ್ಯಶಿಕ್ಷಕ ರಾಘವೇಂದ್ರ ಗಾಣಿಗ ಅಧ್ಯಕ್ಷತೆ ವಹಿಸಿದರು.
ಪತ್ರಕರ್ತ ಕೆ.ಸಂಜೀವ ಆರ್ಡಿ, ಶಿಕ್ಷಕ ಮಂಜುನಾಥ, ಸುಧಾಕರ ನಾಯ್ಕ, ಜಯಲಕ್ಷ್ಮೀ ಎಸ್, ನಮಿತಾ ಜತ್ತನ್ನ, ಅತಿಥಿ ಶಿಕ್ಷಕಿ ಜಯಲಕ್ಷ್ಮೀ, ದಿವ್ಯಾ, ಗೌರವ ಶಿಕ್ಷಕಿ ಪ್ರಿಯಾಂಕ, ಸುಶ್ಮೀತಾ, ವಿದ್ಯಾರ್ಥಿ ನಾಯಕ ಕಾರ್ತಿಕ್ ಎನ್. ಉಪಸ್ಥಿತರಿದ್ದರು.
ಶಿಕ್ಷಕ ನಮಿತಾ ಜತ್ತನ್ನ ಸ್ವಾಗತಿಸಿದರು. ಶಿಕ್ಷಕ ಸುಧಾಕರ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಮಂಜುನಾಥ ನಿರೂಪಿಸಿದರು. ಶಿಕ್ಷಕಿ ಜಯಲಕ್ಷ್ಮೀ ವಂದಿಸಿದರು.