More

  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಅಸಾಧ್ಯ

  ಮಂಗಳೂರು: ದ.ಕ. ಲೋಕಸಭಾ ಸೋಲಿನಲ್ಲಿ ಜಿಲ್ಲಾಧ್ಯಕ್ಷನಾಗಿ ನನ್ನ ಜವಾಬ್ಧಾರಿಯೂ ಇದೆ ಎಂಬುದನ್ನು ಒಪ್ಪುತ್ತೇನೆ. ಆದರೆ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಯಾರೋ ರಾಜೀನಾಮೆ ಕೇಳಿದರೆಂದು ನಾನು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಅಸಾಧ್ಯ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.

  ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ವಾಟ್ಸಾಪ್‌ಗಳಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ರಾಜೀನಾಮೆ ಒತ್ತಾಯದ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.

  ಪಕ್ಷದ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸಿದ್ದೇನೆಯೇ ಹೊರತು ಪಕ್ಷದ ಅಧ್ಯಕ್ಷ ಎಂದು ಹೇಳಿಕೊಂಡು ನನ್ನದೇ ಗ್ರೂಪ್ ಕಟ್ಟಿಕೊಂಡು ಹೋಗಿಲ್ಲ. ಪಕ್ಷದ ಜವಾಬ್ಧಾರಿಯುತ ನಾಯಕರು, ಕಾರ್ಯಕರ್ತರು, ಶಾಸಕರು ಅಥವಾ ವಿಧಾನಸಭೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಅಥವಾ ಲೋಕಸಭೆಯಲ್ಲಿ ಇತ್ತೀಚೆಗೆ ಸ್ಪರ್ಧಿಸಿರುವ ಪದ್ಮರಾಜ್ ಅವರು ರಾಜೀನಾಮೆ ಕೇಳುವುದರಲ್ಲಿ ಅರ್ಥವಿದೆ. ಅದು ಬಿಟ್ಟು ವಾಟ್ಸಾಪ್ ಯುನಿವರ್ಸಿಟಿಯಲ್ಲಿ ರಾಜೀನಾಮೆ ಕೇಳಿದರೆ ಆಗುವುದಿಲ್ಲ. ನಾನು ವಾಟ್ಸಾಪ್ ಯುನಿವರ್ಸಿಟಿ ವಿದ್ಯಾರ್ಥಿ ಅಲ್ಲ. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಹಲವು ಹುದ್ದೆಗಳ ಜವಾಬ್ಧಾರಿಯನ್ನು ನಿರ್ವಹಿಸಿದ್ದೇನೆ. ಮನೆಯಲ್ಲಿ ಕುಳಿತವನನ್ನು ಪಕ್ಷ ಜಿಲ್ಲಾಧ್ಯಕ್ಷನಾಗಿ ಮಾಡಿಲ್ಲ. 1989ರಲ್ಲಿ ನನಗೆ ವಿಧಾನಸಭೆಗೆ ಟಿಕೆಟ್ ನೀಡುವ ನಿಟ್ಟಿನಲ್ಲಿ ಬಿ ಫಾರಂ ನೀಡಲಾಗಿತ್ತು. ಅದಕ್ಕಾಗಿ ಕೆಲಸ ಆರಂಭಿಸಿದ್ದೆ. ಕೊನೆ ಘಳಿಗೆಯಲ್ಲಿ ಬಿ ಫಾರಂ ರದ್ದಾಯಿತು. ಆ ಸಂದರ್ಭ ಪಕ್ಷ ಭಾರೀ ಬಹುಮತದಲ್ಲಿ ಗೆದ್ದಿತ್ತು. ನಾನು ಬಳಿಕವೂ ಪಕ್ಷದಲ್ಲಿ ನಿಷ್ಟಾವಂತನಾಗಿ ದುಡಿಯುತ್ತಿದ್ದೇನೆ. 2004ರಲ್ಲಿ ಮತ್ತೆ ಟಿಕೆಟ್ ದೊರೆಯಿತು. ಪಕ್ಷಕ್ಕೆ 40 ಸ್ಥಾನ ದೊರಕಿತ್ತು. ನಾನೂ ಸೋತೆ. ನನ್ನನ್ನು ಇಂತವರು ಸೋಲಿಸಿದರು ಎಂದು ನಾನು ಕೆಪಿಸಿಸಿಗೆ ದೂರು ನೀಡಿಲ್ಲ. ಯಾರಿಂದಲೂ ಯಾರನ್ನೂ ಸೋಲಿಸಲು ಅಥವಾ ಗೆಲ್ಲಿಸಲು ಆಗುವುದಿಲ್ಲ ಎಂದು ಹರೀಶ್ ಕುಮಾರ್ ಹೇಳಿದರು.

  See also  ಅತಿವೃಷ್ಟಿ ಕಾಮಗಾರಿಗಳು ಬಹುತೇಕ ಅಪೂರ್ಣ

  ಪದ್ಮರಾಜ್ ಅವರು ಸೋಲಿನ ಹೊಣೆ ತಾನು ಹೊರುವುದಾಗಿ ಹೇಳಿದ್ದಾರೆ. ಗೆಲುವು ಸೋಲು ಸಾಮೂಹಿಕ ಹೊಣೆಯಾಗಿರುತ್ತದೆ. ಸೋಲಿನಲ್ಲಿ ನಾನೂ ಜವಾಬ್ಧಾರಿಯಾಗಿದ್ದು, ಸೋಲಿನ ಹೊಣೆಯನ್ನು ನಾವೂ ಹೊರಲಿದ್ದೇವೆ. ಜಿಲ್ಲೆಯಲ್ಲಿ ಸೋಲವನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಪಕ್ಷವನ್ನು ಬಲಪಡಿಸಿ ಮತ್ತೆ ಮುಂದಿನ ಚುನಾವಣೆಗೆ ತಯಾರಾಗಲಿದ್ದೇವೆ ಎಂದು ಹರೀಶ್ ಕುಮಾರ್ ಹೇಳಿದರು.

  ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮುಖಂಡರಾದ ಶುಭೋದಯ ಆಳ್ವ, ಸುರೇಂದ್ರ ಕಂಬಳಿ, ಸುಹಾನ್ ಆಳ್ವ,ಪ್ರಕಾಶ್ ಸಾಲಿಯಾನ್, ನೀರಜ್ ಪಾಲ್, ಜಿತೇಂದ್ರ ಸುವರ್ಣ, ಭರತೇಶ್ ಅಮೀನ್ ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts