More

    ರೈತರು ಎಫ್‌ಐಡಿ ಸಂಖ್ಯೆ ಪಡೆಯುವುದು ಕಡ್ಡಾಯ

    ಶಿವಮೊಗ್ಗ: ಸರ್ಕಾರದಿಂದ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಮೂಲಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಅದರ ಪ್ರಯೋಜನ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ಸರ್ವೇ ನಂಬರ್‌ಗೆ ಆಧಾರ್ ಸಂಖ್ಯೆ ನಮೂದಿಸಿ ಎಫ್‌ಐಡಿ ಸಂಖ್ಯೆ ಪಡೆಯುವುದು ಕಡ್ಡಾಯವಾಗಿದೆ.

    ನೋಂದಣಿಯಾದ ವಿವರಗಳನ್ನು ಬ್ಯಾಂಕ್‌ನಿಂದ ಬೆಳೆ ಸಾಲ, ಬೆಳೆ ವಿಮೆ ಹಾಗೂ ಬೆಳೆಹಾನಿ ಪರಿಹಾರ, ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ ಅಥವಾ ಇನ್‌ಪುಟ್ ಸಬ್ಸಿಡಿ ಮುಂತಾದ ಸವಲತ್ತುಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಜಮೀನಿನ ವಿಸ್ತೀರ್ಣದ ಆಧಾರದ ಮೇಲೆ ಮತ್ತು ಬೆಳೆ ಸಮೀಕ್ಷೆ ಆಧಾರದ ಮೇಲೆ ವಿತರಿಸಲಾಗುವುದರಿಂದ ರೈತರು ತಾವು ಹೊಂದಿರುವ ಎಲ್ಲ ಸರ್ವೇ ನಂಬರ್‌ಗಳನ್ನು ಈ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕಿ ಜಿ.ಸಿ.ಪೂರ್ಣಿಮಾ ತಿಳಿಸಿದ್ದಾರೆ.
    ಫ್ರೂಟ್ಸ್ ಐಡಿಯೊಂದಿಗೆ ಸೇರ್ಪಡೆಯಾಗದೆ ಇರುವ ಸರ್ವೇ ನಂಬರ್‌ಗಳನ್ನು ಸೇರ್ಪಡೆಗೊಳಿಸಲು ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತಮ್ಮ ಆಧಾರ್ ಕಾರ್ಡ್, ಪಹಣಿ ಪತ್ರ, ಬ್ಯಾಂಕ್ ಖಾತೆ ವಿವರ, ಜಾತಿ ಪ್ರಮಾಣಪತ್ರದ ಪ್ರತಿಗಳೊಂದಿಗೆ ಭೇಟಿ ನೀಡಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್, ರೇಷನ್ ಕಾರ್ಡ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts