More

    ಒಣ, ಹಸಿ ತ್ಯಾಜ್ಯ ಪ್ರತ್ಯೇಕ ನೀಡುವುದು ಕಡ್ಡಾಯ

    ನಾಪೋಕ್ಲು: ಹೋಟೆಲ್, ಬೇಕರಿ, ಅಂಗಡಿ, ಕ್ಯಾಂಟೀನ್‌ಗಳ ಒಣ ಮತ್ತು ಹಸಿ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ ಕೊಡಬೇಕು. ತಪ್ಪಿದ್ದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಎಚ್ಚರಿಸಿದ್ದಾರೆ.

    ಈ ಸಂಬಂಧ ಪಂಚಾಯಿತಿಯಿಂದ ಹಲವಾರು ಬಾರಿ ಈ ಹಿಂದೆ ನೋಟಿಸ್ ನೀಡಲಾಗಿದೆಯಾದರೂ ಪದೇ ಪದೆ ತ್ಯಾಜ್ಯವನ್ನು ರಸ್ತೆ ಬದಿ ಹಾಗೂ ಪಂಚಾಯಿತಿ ಮುಂಭಾಗ ರಾತ್ರಿ ವೇಳೆ ತಂದು ಸುರಿಯುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ ತಕ್ಷಣದಿಂದಲೇ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ ಕಸದ ವಾಹನಕ್ಕೆ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಯಮ ಪಾಲಿಸದೆ ಎಲ್ಲೆಂದರಲ್ಲಿ ಕಸ ಎಸೆಯುವುದು ಕಂಡು ಬಂದರೆ ಯಾವುದೇ ಮುನ್ಸೂಚನೆ ನೀಡದೆ ಪಂಚಾಯಿತಿಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ವಿಂಗಡನೆ ಮಾಡದಿದ್ದಲ್ಲಿ ಪಂಚಾಯಿತಿಯಿಂದ ಕಸವನ್ನು ಸ್ವೀಕರಿಸಲಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
    ಪ್ಲಾಸ್ಟಿಕ್ ಬಳಕೆಯನ್ನು ಪಂಚಾಯಿತಿ ಕಟ್ಟುನಿಟ್ಟಾಗಿ ನಿಷೇಧಿಸಿದೆ. ಹೀಗಾಗಿ ಬಟ್ಟೆ ಬ್ಯಾಗ್‌ಗಳನ್ನು ಉಪಯೋಗಿಸುವುದು ಸೂಕ್ತ. ಪ್ಲಾಸ್ಟಿಕ್ ಬಳಕೆ ಕಂಡು ಬಂದರೆ ಪಂಚಾಯಿತಿಯಿಂದ ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts