

ಕೋಟ: ಇಂದಿನ ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆ ಸಾಧಿಸುವುದು ಒಂದು ಸವಾಲಾಗಿದೆ. ಪುಸ್ತಕ ಜಗತ್ತಿನಲ್ಲಿ ಅಪಾರವಾದ ಜ್ಞಾನವಿದೆ ಎಂದು ಮಣೂರು ಸರ್ಕಾರಿ ಪ್ರೌಢಶಾಲೆ ಹಿರಿಯ ಕನ್ನಡ ಶಿಕ್ಷಕ ರಾಮದಾಸ ಬಿ.ನಾಯಕ ಹೇಳಿದರು.
ಕೋಟಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್.ಆರ್.ರಂಗನಾಥ ಅವರ ಜನ್ಮದಿನಾಚರಣೆ ನಿಮಿತ್ತ ಹಮ್ಮಿಕೊಂಡ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜು ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ ಅಧ್ಯಕ್ಷತೆ ವಹಿಸಿದ್ದರು. ಗ್ರಂಥಪಾಲಕಿ ರಾಧಾ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ರಮೇಶ್ ಆಚಾರ್, ಐಕ್ಯೂಎಸಿ ಸಂಚಾಲಕ ಡಾ.ಸುಬ್ರಹ್ಮಣ್ಯ ಎ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಕ್ಷಾ ಸ್ವಾಗತಿಸಿದರು. ತ್ರಿಷಾ ವಂದಿಸಿದರು. ಶದ್ಧಾ ಕಾರ್ಯಕ್ರಮ ನಿರೂಪಿಸಿದರು.