

ಕುಂದಾಪುರ: ವಿದ್ಯೆಯೊಂದಿಗೆ ಸಂಸ್ಕಾರ ಬೆಳೆಸಿಕೊಂಡಾಗ ಮಕ್ಕಳು ಆದರ್ಶ ವಿದ್ಯಾರ್ಥಿಗಳಾಗಿ ಬೆಳೆಯುತ್ತಾರೆ. ಯಾವುದೇ ವಿಷಯವನ್ನು ಅಧ್ಯಯನ ವಾಡುವಾಗ ಅದರ ಬಗ್ಗೆ ಚಿಂತನೆ ವಾಡಬೇಕು ಆಗ ನಿರ್ದಿಷ್ಟ ಗುರಿ ಸಾಧಿಸಲು ಸಾಧ್ಯ ಎಂದು ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು.
ಕುಂದಾಪುರದ ಯಡಾಡಿ ಮತ್ಯಾಡಿಯ ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಸುಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ವಾಧ್ಯಮ ಪ್ರೌಢಶಾಲೆಯಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ಭಾರತೀತೀರ್ಥ ಅನುಗ್ರಹದಿಂದ ನಡೆದ ಅಕ್ಷರಾಭ್ಯಾಸ ಮತ್ತು ಸುವಿದ್ಯಾರಂಭ, ವಾಣಿ ವಿಲಾಸ ವಿದ್ಯಾರ್ಥಿ ನಿಲಯ ಹಾಗೂ ನೂತನ ಕಟ್ಟಡ ಉದ್ಘಾಟಿಸಿ ವಾತನಾಡಿದರು.
ಶಾಲಾ ಕಟ್ಟಡದಲ್ಲಿ ಶಾರದಾ ದೇವಿಯ ವಿಗ್ರಹ ಪ್ರತಿಷ್ಠಾಪಿಸಿ ವಿಶೇಷ ಪೂಜೆ ವಾಡಿ, ಎಲ್ಲ ವಿದ್ಯಾರ್ಥಿಗಳಿಗೆ ವಿದ್ಯಾರಂಭ ನೆರವೇರಿಸಿದರು.
ನಿವೃತ್ತ ಪ್ರಾಂಶುಪಾಲ ಎಂ.ಬಾಲಕೃಷ್ಣ ಶೆಟ್ಟಿ, ಉಡುಪಿ ಬಡಗುಬೆಟ್ಟು ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಾತನಾಡಿದರು. ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಬ್ಲಾಡಿ ಮಂಜಯ್ಯ ಶೆಟ್ಟಿ, ಶ್ರೀ ಶಾರದಾ ಪೀಠ ಶೃಂಗೇರಿ ಪ್ರಾಂತೀಯ ಧರ್ವಾಧಿಕಾರಿ ಲೋಕೇಶ ಅಡಿಗ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ರುರಾಮ ದೇವಾಡಿಗ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸುಜ್ಞಾನ ಪ.ಪೂ. ಕಾಲೇಜಿನ ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ ಮತ್ತು ವಿದ್ಯಾರಣ್ಯ ಆಂಗ್ಲ ವಾಧ್ಯಮ ಶಾಲೆ ಮುಖ್ಯಶಿಕ್ಷಕ ಪ್ರದೀಪ್ ಕೆ. ಉಪಸ್ಥಿತರಿದ್ದರು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ರಜತ್ ಭಟ್ ನಿರೂಪಿಸಿದರು.