More

    ಕಾಫಿ ಬೆಳೆಗಾರರ ವಿರುದ್ಧ ದೂರು ದಾಖಲು ಸರಿಯಲ್ಲ

    ಸಿದ್ದಾಪುರ: ಜಿಲ್ಲೆಯಲ್ಲಿ ಕಾಫಿ ಬೆಳೆಗಾರರು ಮತ್ತು ಕಾರ್ಮಿಕರ ನಡುವೆ ಉತ್ತಮ ಬಾಂಧವ್ಯ ಇದ್ದು, ಇತ್ತೀಚಿನ ದಿನಗಳಲ್ಲಿ ಕೆಲವರ ಕುಮ್ಮಕ್ಕಿನಿಂದಾಗಿ ಕಾಫಿ ತೋಟದ ಮಾಲೀಕರ ವಿರುದ್ಧ ಪೊಲೀಸರು ಜಾತಿ ನಿಂದನೆ, ಜೀತ ಪದ್ಧತಿ ದೂರು ದಾಖಲಿಸಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ.ಲೋಕೇಶ್ ಕಿಡಿಕಾರಿದರು.

    ದಕ್ಷಿಣ ಕೊಡಗಿನ ಕುಟ್ಟ, ಗೋಣಿಕೊಪ್ಪ ಮತ್ತು ಪಾಲಿಬೆಟ್ಟ ಪೊಲೀಸ್ ಠಾಣೆಯಲ್ಲಿ ಒಟ್ಟು 9 ಜನರ ಮೇಲೆ ಸುಳ್ಳು ಕೇಸು ದಾಖಲಿಸಲಾಗಿದೆ. ಪೊಲೀಸರು ಅಮಾಯಕರ ಮೇಲೆ ಕೇಸು ದಾಖಲಿಸಲು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವೇ ಪ್ರಮುಖ ಕಾರಣ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಸೂಕ್ತ ತನಿಖೆ ನಡೆಸಿ ಅಮಾಯಕರಿಗೆ ನ್ಯಾಯ ಒದಗಿಸಬೇಕಿದೆ. ಇಲ್ಲದಿದ್ದಲ್ಲಿ ಎಸ್‌ಪಿ ಕಚೇರಿ ಎದುರು ಹೋರಾಟ ಹಮ್ಮಿಕೊಳ್ಳುವುದಾಗಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.

    ಮೆಡಿಕಲ್ ಕಾಲೇಜು, ಸೈನಿಕ ಶಾಲೆ, ಇಂಜಿನಿಯರಿಂಗ್ ಕಾಲೇಜು, ಟರ್ಫ್ ಮೈದಾನ ಯಾರ ಕೊಡುಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರಿಗೆ ತಿಳಿಸಲಿ. ಕೇವಲ ರಾಜಕೀಯ ಲಾಭಕ್ಕಾಗಿ ಆರೋಪ ಮಾಡುವ ಮನಸ್ಥಿತಿ ಬದಲಾಯಿಸಿಕೊಳ್ಳಲಿ ಎಂದರು.

    ಗುಡ್ಡಗಾಡು ಪ್ರದೇಶವಾದ ಕೊಡಗಿನಲ್ಲಿ ಪ್ರಾಚೀನ ಕಾಲದಿಂದಲೇ ವನ್ಯಪ್ರಾಣಿಗಳ ಉತ್ಪನ್ನಗಳನ್ನು ಬಳಕೆ ಮಾಡಲಾಗುತ್ತಿದೆ. ಆದರೆ ಇದೀಗ ವನ್ಯಪ್ರಾಣಿ ಉತ್ಪನ್ನ ಬಳಕೆ ಮಾಡುವವರ ವಿರುದ್ಧ ಕಾನುನು ಕ್ರಮ ಜರುಗಿಸುವುದಾಗಿ ಜಿಲ್ಲೆಯ ಅರಣ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ. ಶಾಸಕ ಎ.ಎಸ್.ಪೊನ್ನಣ್ಣ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದರೂ ಈ ಕುರಿತು ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡದೆ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.

    ಬಿಜೆಪಿ ಮುಖಂಡರಾದ ಅನಿಲ್ ಶೆಟ್ಟಿ, ಎಂ.ಎ.ಆನಂದ, ಕೆ.ಆರ್.ಸತೀಶ್ ಮತ್ತು ರೀನಾ ತುಳಸಿ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts