ಪರಿಸರ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ

parisara dina
ರೋಟರಿ ಕ್ಲಬ್ ಕಾರ್ಕಳ ವತಿಯಿಂದ ವನಮಹೋತ್ಸವ ಆಚರಿಸಲಾಯಿತು.
Published on

ಕಾರ್ಕಳ: ಪರಿಸರ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು. ಜೀವಿಗಳು ಸುಂದರ ಬದುಕು ಕಟ್ಟಿಕೊಳ್ಳಬೇಕಾದಾರೆ ಪರಿಸರ ಅಷ್ಟೇ ಮುಖ್ಯವಾದುದು. ನಾವು ಪರಿಸರಕ್ಕೆ ನಮ್ಮಿಂದಾದ ಕೊಡುಗೆ ನೀಡುವ ಮೂಲಕ ಪರಿಸರದ ಉಳಿವಿಗಾಗಿ ಶ್ರಮಿಸುವ ಅಗತ್ಯವಿದೆ ಎಂದು ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ ಹೇಳಿದರು.

ಕಾಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಕಳ ರೋಟರಿ ಕ್ಲಬ್ ವತಿಯಿಂದ ಇತ್ತೀಚೆಗೆ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ಅರಿಸ್ ಅಧ್ಯಕ್ಷತೆ ವಹಿಸಿದ್ದರು. ಮೋಹನ್ ಶೆಣೈ, ಕಾರ್ಯದರ್ಶಿ ಚೇತನ್ ನಾಯಕ್, ಕಮ್ಯುನಿಟಿ ಸರ್ವೀಸ್ ಚೇರ್ಮನ್ ವಸಂತ್ ಎಂ., ಪ್ರೌಢಶಾಲಾ ಮುಖ್ಯಶಿಕ್ಷಕಿ ಇಂದಿರಾ, ಶಾಲಾ ಹಿತೈಷಿ ವೈಕುಂಠ ಶೆಣೈ, ವಾಜಿ ಸಹಾಯಕ ಗವರ್ನರ್ ಶೈಲೇಂದ್ರ ರಾವ್, ಮಾಜಿ ವಲಯ ಸೇನಾನಿ ಸುರೇಶ ನಾಯಕ್ ದಂಪತಿ, ಉಪಾಧ್ಯಕ್ಷ ಅರುಣ್ ಶೆಟ್ಟಿ, ಶೇಖರ್ ಎಚ್., ಬಾಲಕೃಷ್ಣ ದೇವಾಡಿಗ, ಅಲೆನ್ ಡಿಸೋಜ, ಸುಧಾಕರ್ ಪೂಜಾರಿ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಸುಧಾಕರ್ ಪೂಜಾರಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನರೇಂದ್ರ ಕಾಮತ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net