ಸರ್ಕಾರ ಸ್ವಲ್ಪ ಮಟ್ಟಿಗೆ ಶೇಕ್ ಆಗಿರೋದು ನಿಜ: ಸಚಿವ ಪರಮೇಶ್ವರ್ ಅಚ್ಚರಿ ಹೇಳಿಕೆ!

blank

ಬೆಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ಬಳಿಕ ಸರ್ಕಾರ ಸ್ವಲ್ಪ ಮಟ್ಟಿಗೆ ಶೇಕ್ ಆಗಿರೋದು ಹೌದು, ಆದರೆ ಇದನ್ನು ಸರಿಪಡಿಸಿಕೊಂಡು ಆಡಳಿತ ಮುಂದುವರೆಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ನಾಳೆ ಪ್ರತಿಭಟನೆ: ಆರ್.ಅಶೋಕ್‌

ರಾಜ್ಯ ಸರ್ಕಾರ ಸ್ವಲ್ಪ ಮಟ್ಟಿಗೆ ಶೇಕ್ ಆಗಿರೋದು ಹೌದು, ಇಲ್ಲ ಅಂತ ಹೇಳಿದರೆ ನಾನು ಸುಳ್ಳು ಹೇಳಿದಂತಾಗುತ್ತದೆ. ಆದರೆ ಇದನ್ನೆಲ್ಲ ನಾವು ಸರಿಪಡಿಸಿಕೊಂಡು ಆಡಳಿತ ಮುಂದುವರಿಸುತ್ತೇವೆ. ಸಂಪುಟ ಸಭೆಯಲ್ಲೂ ನಾವ್ಯಾರೂ ಬಿಜೆಪಿ ಹುನ್ನಾರಕ್ಕೆ ಬಲಿಯಾಗೋದು ಬೇಡ, ಕಾನೂನು ಸಮರ ಮುಂದುವರಿಸಿಕೊಂಡು ಆಡಳಿತ ನಡೆಸುವ ತಿರ್ಮಾನ ಮಾಡಿದ್ದೇವೆ. ಆದರೆ ಬಿಜೆಪಿ ಹೇಗಾದರೂ ಮಾಡಿ ಈ ಸರ್ಕಾರ ಬೀಳಿಸುವ ಸ್ಕೀಂ ಹಾಕಿಕೊಂಡಿದೆ. ಸಿದ್ದರಾಮಯ್ಯ ಮೂಲಕ ಸರ್ಕಾರ ಅಸ್ಥಿರಗೊಳಿಸುವ ಉದ್ದೇಶವನ್ನು ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಪಾಲರ ಕಚೇರಿ ದುರ್ಬಳಕೆ ಯಾಗುತ್ತಿದೆ. ಹೀಗಾಗಿ ಕಾನೂನು ಹೋರಾಟ ನಡೆಸುವುದರ ಜೊತೆಗೆ ರಾಜಕೀಯವಾಗಿಯೂ ತಕ್ಕ ಉತ್ತರ ನೀಡುತ್ತೇವೆ. ನಾಳೆಯಿಂದ ನಮ ಪಕ್ಷದ ಕಾರ್ಯಕರ್ತರು ಬೀದಿಗಿಳಿಯಲಿದ್ದಾರೆ. ಈ ಬಗ್ಗೆ ಈಗಾಗಲೇ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ಪ್ರತಿಭಟನೆ ವೇಳೆ ಕಲ್ಲುತೂರಾಟ ಸೇರಿದಂತೆ ಯಾವುದೇ ಹಿಂಸಾತಕ ಕೃತ್ಯಗಳನ್ನು ನಡೆಸದೆ ಶಾಂತಿಯುತ ಹೋರಾಟ ಮುಂದುವರೆಸಲಾಗುವುದು ಎಂದು ತಿಳಿಸಿದರು.

ಬಿಜೆಪಿಯವರೂ ಪ್ರತಿಭಟನೆ ಮಾಡಲಿ, ಅದು ಅವರ ಹಕ್ಕು ಹಾಗೆಯೇ ನಾವೂ ಹೋರಾಟ ಮಾಡ್ತೀವಿ, ಇದು ನಮ್ಮ ಹಕ್ಕು. ಜಿಲ್ಲೆ, ತಾಲ್ಲೂಕುಗಳಲ್ಲಿ ನಮ್ಮ ಕಾರ್ಯಕರ್ತರು ಹೋರಾಟಕ್ಕೆ ಇಳಿಯುವ ಅನಿವಾರ್ಯತೆ ಬಂದಿದೆ. ಅವರಿಗೆ ರಾಜಕೀಯ ಉತ್ತರ ಕೊಡಲು ರಾಜಕೀಯ ಹೋರಾಟವೇ ಮಾಡಬೇಕು. ನಾಳೆ (ಆ.19) ರಾಜ್ಯಾದ್ಯಂತ ಪಕ್ಷದಿಂದ ಶಾಂತಿಯುತ ಪ್ರತಿಭಟನೆಗೆ ಅಧ್ಯಕ್ಷರು ಕರೆ ಕೊಟ್ಟಿದ್ದಾರೆ.

ರಾಜ್ಯಪಾಲರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವುದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸಿರುವುದು, ಮುಖ್ಯಮಂತ್ರಿಯವರನ್ನು ಗುರಿಯಾಗಿಸಿ ಸರ್ಕಾರವನ್ನೇ ಪತನಗೊಳಿಸುವ ಸಂಚು ನಡೆದಿರುವುದು ಕಣ್ಣೆದುರಿಗೆ ಇದೆ ಎಂದರು.

ಮಹಾರಾಷ್ಟ್ರ: ಬಿಸ್ಕತ್ ತಿಂದು 250ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ! ಅಷ್ಟಕ್ಕೂ ಆ ಶಾಲೆಯಲ್ಲಿ ಆಗಿದ್ದೇನು?

Share This Article

ಗರ್ಭಾವಸ್ಥೆಯಲ್ಲಿ ತೂಕ ಹೆಚ್ಚಾಗಲು ಕಾರಣ ಏನು ಗೊತ್ತಾ?; ಇಲ್ಲಿದೆ ಕಂಪ್ಲೀಟ್​ ಮಾಹಿತಿ | Health Tips

ಗರ್ಭಾವಸ್ಥೆಯಲ್ಲಿ ತೂಕ ಹೆಚ್ಚಾಗುವುದು ಸಹಜ. ಈ ಅವಧಿಯಲ್ಲಿ ತೂಕ ಹೆಚ್ಚಾಗುವುದು ಮಗು ಸರಿಯಾಗಿ ಬೆಳೆಯುತ್ತಿದೆ ಎಂಬುದರ…

ಗರ್ಭಿಣಿಯರು ಈ ಪದಾರ್ಥಗಳಿಂದ ದೂರವಿರಿ; ಇಲ್ಲವಾದಲ್ಲಿ ಮಗುವಿಗೆ ಅಪಾಯ ತಪ್ಪಿದ್ದಲ್ಲ | Health Tips

ಪ್ರತಿಯೊಬ್ಬ ಮಹಿಳೆಯೂ ತನ್ನ ಗರ್ಭಾವಸ್ಥೆಯು ಆರೋಗ್ಯಕರವಾಗಿರಬೇಕು ಎಂದು ಬಯಸುತ್ತಾರೆ. ಇದರಿಂದ ತಾಯಿ ಮತ್ತು ಭ್ರೂಣದ ಆರೋಗ್ಯವು…

ಮದುವೆಯಾಗಲು ಸೂಕ್ತ ವಯಸ್ಸು ಯಾವುದು?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಪರಿಹಾರ … | Marriage

ನಮ್ಮಲ್ಲಿ ಹೆಚ್ಚಿನವರು ತಾವು ಬಯಸಿ ಅಥವಾ ಬಯಸದಿದ್ದರೂ ಒಂದು ಹಂತದಲ್ಲಿ ಮದುವೆಯಾಗಲು ಒತ್ತಡವನ್ನು ಅನುಭವಿಸುತ್ತಾರೆ. ವಯಸ್ಸು…