ಬೇಡಿಕೆ ಈಡೇರಿಕೆಗೆ ಗ್ರಾಮ ಆಡಳಿತ ಅಧಿಕಾರಿಗಳ ಪಟ್ಟು

MUSHKARA
ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ ಕರೆಯಂತೆ ಕುಂದಾಪುರ ಘಟಕದ ಗ್ರಾಮ ಆಡಳಿತ ಅಧಿಕಾರಿಗಳು ಕುಂದಾಪುರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
Published on

ಕುಂದಾಪುರ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ ಕರೆಯಂತೆ ಕುಂದಾಪುರ ಘಟಕದ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ಕುಂದಾಪುರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕಂದಾಯ ಇಲಾಖೆಯಿಂದ ನಿರಂತರವಾಗಿ ಸರ್ಕಾರದಿಂದ ಅಭಿವೃದ್ಧಿಪಡಿಸಿರುವ ಹಕ್ಕುಪತ್ರ, ಆಧಾರ್ ಸೀಡ್, ಬೆಳೆ ಕಟಾವು ಮೊಬೈಲ್‌ಆ್ಯಪ್, ಭೂಮಿ, ದಿಶಾಂಕ್ ಸೇರಿದಂತೆ ಸುಮಾರು 21 ಎಲ್ಲ ವೆಬ್/ ಮೊಬೈಲ್ ತಂತ್ರಾಂಶಗಳ ಮೂಲಕ ಹಾಗೂ ಸಿ-ವೃಂದದ ನೌಕರರ ಹತ್ತು ಪಟ್ಟು ಕೆಲಸ ನಿರ್ವಹಿಸುತ್ತಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳ ವೇತನ ಶ್ರೇಣಿ ನೀಡಬೇಕು. ಮೂಲಸೌಲಭ್ಯ ಕಲ್ಪಿಸಬೇಕು, ಸೇವಾ ವಿಷಯಗಳಿಗೆ ಸಂಬಂಧಿಸಿ ಸೌಲಭ್ಯ ಕಲ್ಪಿಸಬೇಕು, ತಂತ್ರಾಂಶಗಳಿಗೆ ಸಂಬಂಧಿಸಿದ ಎಲ್ಲ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯಬೇಕು, ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕಬಾರದು ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸಿದರು.

ಗ್ರಾಮ ಆಡಳಿತ ಅಧಿಕಾರಿ ಸಂಘದ ತಾಲೂಕು ಅಧ್ಯಕ್ಷ ಶಿವರಾಯ, ಸಾಮಾಜಿಕ ಕಾರ್ಯಕರ್ತ ಕೋಡಿ ಅಶೋಕ ಪೂಜಾರಿ, ನಿವೃತ್ತ ನೌಕರರ ಜಿಲ್ಲಾಧ್ಯಕ್ಷ ಪ್ರಕಾಶ್ ಚಂದ್ರಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿಘ್ನೇಶ್ ಉಪಾಧ್ಯ, ಉಪಾಧ್ಯಕ್ಷ ಆನಂದಕುಮಾರ, ಖಜಾಂಚಿ ಸೋಮಪ್ಪ ಹೆಬ್ಬಾಳ, ರಾಜ್ಯ ಪರಿಷತ್ ಸದಸ್ಯ ಆನಂದ್ ಮುಕ್ಕಣ್ಣ, ಮಹಿಳಾ ಕಾರ್ಯದರ್ಶಿ ಹೇಮಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ ಹಾಗೂ ಹಾಗೂ ಕುಂದಾಪುರ ತಾಲೂಕಿನ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು. ಸರ್ಕಾರಿ ಕಂದಾಯ ನೌಕರರ ಸಂಘ ಅಧ್ಯಕ್ಷ ರಾಘವೇಂದ್ರ ಬಾಹ್ಯ ಬೆಂಬಲ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net