ಮುಸ್ಲಿಂ ಸಮುದಾಯವನ್ನು ಓಲೈಕೆ ಮಾಡಿದ್ದಾರೆ ಎಂಬುದು ತಪ್ಪು: ಡಾ.ಜಿ.ಸಚಿವ ಪರಮೇಶ್ವರ್ | Minister Parameshwar

dk - 2025-03-07T174900.168
Published on

Minister Parameshwar: ರಾಜ್ಯದಲ್ಲಿ ಮುಸ್ಲಿಂ ಸಮುದಾಯದವರು ಶೇ.18ರಷ್ಟಿದ್ದಾರೆ. ಅವರನ್ನು ಹೊರತುಪಡಿಸಿ ಅಭಿವೃದ್ಧಿ ಮಾಡಲು ಆಗುವುದಿಲ್ಲ. ಅವರನ್ನು ಅಭಿವೃದ್ಧಿಯ ಜೊತೆಯಲ್ಲೇ ತೆಗೆದುಕೊಂಡು ಹೋಗಬೇಕಾಗುತ್ತದೆ. ಈ ನಿಟ್ಟಿನಲ್ಲಿಯೇ ಕೆಲವು ಕಾರ್ಯಕ್ರಮಗಳನ್ನು ಬಜೆಟ್​ನಲ್ಲಿ ನೀಡಲಾಗಿದೆ. ಹಾಗೆಂದ ಮಾತ್ರಕ್ಕೆ ಓಲೈಕೆ ಮಾಡಿದ್ದಾರೆ ಎಂಬುದು ತಪ್ಪು. ಎಲ್ಲ ವರ್ಗದ ಜನರ ಏಳಿಗೆಗಾಗಿ ಆಧ್ಯತೆ ನೀಡಿದ್ದಾರೆ ಎಂದು ಸಚಿವ ಪರಮೇಶ್ವರ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದರು. ಸಾಮಾಜಿಕ ನ್ಯಾಯ ಎತ್ತಿ ಹಿಡಿದಿರುವ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಸಮತೋಲನ ಬಜೆಟ್

ಸಿದ್ದರಾಮಯ್ಯ ಅವರು ಬಡವರು, ಶ್ರಮಿಕರು ಸೇರಿದಂತೆ ರಾಜ್ಯದ ಎಲ್ಲ ವರ್ಗದ ಜನರ ಸರ್ವತೋಮುಖ ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಸಮತೋಲನವಾದ ಬಜೆಟ್ ನೀಡಿದ್ದಾರೆ ಎಂದರು.

ರಾಜ್ಯದ ಇತಿಹಾಸದಲ್ಲೇ 16 ಬಾರಿ ಬಜೆಟ್ ಮಂಡಿಸಿ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಅವರಿಗೆ ಈ ಮೂಲಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಬಾರಿಯ ಬಜೆಟ್ ೪.೦೯ ಲಕ್ಷ ಕೋಟಿಗೆ ಹೋಗಿದೆ. ಅದು ಸಾಮಾನ್ಯ ಅಂತ ನಾನು ಅಂದುಕೊಳ್ಳುವುದಿಲ್ಲ. ಎಲ್ಲರಿಗೂ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ ಎಂದಿದ್ದಾರೆ.

ಪೊಲೀಸ್ ಇಲಾಖೆಯ ಬಲವರ್ಧನೆಗೆ ಒತ್ತು ನೀಡಿರುವುದು ಸ್ವಾಗತರ್ಹ

ನಮ್ಮ ಸರ್ಕಾರವು ನಂದಿ ಬೆಟ್ಟದ ಕೂಡುಗುರ್ಕಿ ಮತ್ತು ಕೆಜಿಎಫ್ ಬಳಿ ಎರಡು ಭಾರತೀಯ ಮೀಸಲು ಪೊಲೀಸ್ ಪಡೆಗಳನ್ನು (ಐಆರ್​ಬಿ) ಸ್ಥಾಪಿಸಲು 80 ಕೋಟಿ ರೂಪಾಯಿ ಅನುದಾನ ಕಲ್ಪಿಸಲಾಗಿದೆ. ಬೆಂಗಳೂರು ನಗರದ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗಾಗಿ ಈಗಿರುವ 8 ಪೊಲೀಸ್ ವಿಭಾಗಗಳನ್ನು 11ಕ್ಕೆ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ 5 ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸಕ್ತ ವರ್ಷದಿಂದ ಬಳ್ಳಾರಿ, ದಾವಣಗೆರೆ, ಮೈಸೂರ್ ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳ ಸ್ಥಾಪನೆಗೆ ಒತ್ತು ನೀಡಿರುವುದು ಸ್ವಾಗತಾರ್ಹ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net