ಕಾರ್ಕಳ: ವಿದ್ಯಾರ್ಥಿ ಜೀವನದಲ್ಲಿ ಸಾಧ್ಯವಾಗುವ ಎಲ್ಲ ರೀತಿಯ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು, ಆಗ ಸಾಧನೆ ಹೊಸ ಹಾದಿ ತೆರೆದುಕೊಳ್ಳುತ್ತದೆ ಎಂದು ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಆಡಳಿತಾಧಿಕಾರಿ ಗಣಪತಿ ಭಟ್ ಹೇಳಿದರು.
ನಿಟ್ಟೆ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾಣಿಜ್ಯ, ವಿಜ್ಞಾನ ಮತ್ತು ಐಟಿ ಮಾದರಿಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲೆ ಡಾ.ವೀಣಾಕುಮಾರಿ ಬಿ.ಕೆ. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಮೇಶ್ ಎಂ. ಮಾಹಿತಿ ನೀಡಿ, ಮಾದರಿ ಪ್ರದರ್ಶದಲ್ಲಿ ಕಾರ್ಕಳ ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ 3000 ವಿದ್ಯಾರ್ಥಿಗಳು ವೀಕ್ಷಣೆಗಾಗಿ ಡಾ.ಎನ್.ಎಸ್.ಎ.ಎಂ ಪ್ರಥಮದರ್ಜೆ ಕಾಲೇಜು ನಿಟ್ಟೆಗೆ ಭೇಟಿ ನೀಡಲಿದ್ದಾರೆ ಮತ್ತು ವಿದ್ಯಾರ್ಥಿಗಳು ರಚಿಸಿದ 52 ವಿವಿಧ ಮಾದರಿ ಅವರನ್ನು ಆಕರ್ಷಿಸುತ್ತದೆ ಎಂದರು.
ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಗಣಿತ ನಗರದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಿಸಿದ್ದರು. ಉಪನ್ಯಾಸಕಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.