ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ಆಪ್ತನಿಗೆ ಐಟಿ ಶಾಕ್; ದಾಖಲೆ ಇಲ್ಲದ ಕೋಟ್ಯಾಂತರ ರೂ. ವಶಕ್ಕೆ

1 Min Read
IT Raid

ನೆಲಮಂಗಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಡಾ. ಕೆ. ಸುಧಾಕರ್​ ಆಪ್ತ ಮಾದಾವರ ಗೋವಿಂದಪ್ಪ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ಗುರುವಾರ (ಏಪ್ರಿಲ್ 25) ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾಗಿರುವ ಮಾದಾವರ ಗೋವಿಂದಪ್ಪ ಅವರ ಮನೆಯಲ್ಲಿ ಹಣ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣ ಪತ್ತೆಯಾಗಿದೆ. ಸುಮಾರು 4.80 ಕೋಟಿ ರೂಪಾಯಿ ಹಣ ಹಾಗೂ ಅಪಾರ ಪ್ರಮಾಣ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

See also  ಉಗ್ರರ ದಾಳಿಗೂ ಜಗ್ಗದ, ಚೀನಾದ ದಾಖಲೆ ಮುರಿಯಲು ಸಜ್ಜಾಗುತಿದೆ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ
Share This Article