More

    ಬ್ಯಾಡಗಿಯಲ್ಲಿ ಕೈ ಮುಖಂಡನ ಮನೆ ಮೇಲೆ ಐಟಿ ದಾಳಿ; 2.85 ಕೋಟಿ ರೂ. ವಶಕ್ಕೆ!

    ಹಾವೇರಿ: ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ರಾಜ್ಯ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿರುವ ನಡುವೆ ಕೆಲವು ಮುಖಂಡರ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ದಾಳಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ಅವರ ಮನೆಯ ಮೇಲೆ ಇಂದು ದಾಳಿ ನಡೆಸಲಾಗಿದೆ.

    ಇದನ್ನೂ ಓದಿ : ಒಂದೇ ಸಮಯದಲ್ಲಿ ಗರ್ಭಿಣಿಯರಾದ ನಾಲ್ವರು ಸಹೋದರಿಯರು!

    ಮುಂಜಾನೆಯೇ ಕಾರ್ಯಾಚರಣೆ ನಡೆಸಿರುವ ತೆರಿಗೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬ್ಯಾಡಗಿ ಪಟ್ಟಣದ ವಿದ್ಯಾ ನಗರದ ನಿವಾಸದ ಮೇಲೆ ದಾಳಿ ನಡೆದಿದೆ. ಚನ್ನಬಸಪ್ಪ ಮನೆ ಮೇಲೆ ಐಟಿ ದಾಳಿ ಅಂತ್ಯವಾಗಿದೆ. ಅಧಿಕಾರಿಗಳು ಶೋಧಕಾರ್ಯವನ್ನು ಮುಗಿಸಿ ಹಲವು ದಾಖಲೆ ಹಾಗೂ ಅಪಾರ ಪ್ರಮಾಣದ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಬ್ಯಾಡಗಿ ಪಟ್ಟಣದ ವಿದ್ಯಾನಗರದಲ್ಲಿರುವ ಚನ್ನಬಸಪ್ಪ ಮನೆಯಲ್ಲಿ ಬೆಳಿಗ್ಗೆಯಿಂದ ನಿರಂತರವಾಗಿ ಶೋಧನೆ ಕಾರ್ಯ ಮುಂದುವರೆದಿತ್ತು. ಚನ್ನಬಸಪ್ಪ ಮನೆಯಲ್ಲಿ ಒಟ್ಟು 2 ಕೋಟಿ 85 ಲಕ್ಷ ರೂಪಾಯಿ ಪತ್ತೆಯಾಗಿದೆ ಎನ್ನಲಾಗಿದೆ. ಚನ್ನಬಸಪ್ಪ ಹುಲ್ಲತ್ತಿ ಈ ಹಿಂದೆ ಎಪಿಎಂಸಿ ಸಮಿತಿ ಅಧ್ಯಕ್ಷರಾಗಿದ್ದರು. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿವಾಸವಿದೆ.

    ಪತ್ನಿಯ ನಿರೀಕ್ಷೆ, ವಾಸ್ತವವೆಂದು ಫೋಟೋ ಹಂಚಿಕೊಂಡ ನಟ ಯಶ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts