More

    ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ; ಚುನಾವಣಾ ಸಮಯದಲ್ಲಿ ಶಾಕ್!

    ಬೆಂಗಳೂರು: ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ಮನೆಗೆ ದಾಳಿ ಮಾಡಿದ್ದಾರೆ. ಕೆಜಿಎಫ್ ಬಾಬು ನಿವಾಸದ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕೆಜಿಎಫ್ ಬಾಬು ಸೇರಿದಂತೆ ರಾಜ್ಯದ ವಿವಿಧೆಡೆ ಕೆಲ ಕಾಂಗ್ರೆಸ್ ನಾಯಕರ ಮನೆ ಮೇಲೆಯೂ ಐಟಿ ದಾಳಿ ನಡೆದಿದೆ ಎಂದು ವರದಿಯಾಗಿದೆ. 

    ಇದನ್ನೂ ಓದಿ: ಗೊಂದಲ ಸೃಷ್ಟಿ ಬೇಡ, ಚನ್ನಪಟ್ಟಣದಲ್ಲಿ ಸಮರ್ಥ ಅಭ್ಯರ್ಥಿ ಇದ್ದಿದ್ದರೆ ಮಂಡ್ಯದಿಂದ ಸ್ಪರ್ಧಿಸುತ್ತಿದ್ದೆ; ಎಚ್​ಡಿಕೆ

    ದಾಖಲೆ ಪರಿಶೀಲನೆ

    ಐಟಿ ಅಧಿಕಾರಿಗಳು ಕೆಜಿಎಫ್‌ ಬಾಬುಗೆ ಸೇರಿದ ರಕ್ಸಾನಾ ಪ್ಯಾಲೇಸ್‌ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನೆಲೆ ಐಟಿ ಅಧಿಕಾರಿಗಳು ಕೆಜಿಎಫ್ ಬಾಬು ಮನೆಗೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗದೆ. ಆದಾಯ ತೆರಿಗೆ ವಂಚನೆಯಡಿ, ಕಳೆದ ವರ್ಷ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

    ಇದನ್ನೂ ಓದಿ: ಕದನ ಕಣದಲ್ಲಿ ತೊಡೆತಟ್ಟಿದ ಕೋಟಿವೀರರು; ಇಲ್ಲಿದೆ ಶತಕೋಟ್ಯಧೀಶ ರಾಜಕಾರಣಿಗಳ ಒಟ್ಟು ಆಸ್ತಿ ವಿವರ…

    ಕಾಂಗ್ರೆಸ್​ನಿಂದ ಅಮಾನತು

    ಕೆಜಿಎಫ್‌ ಬಾಬು ಈ ಬಾರಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದರು. ಕಾಂಗ್ರೆಸ್​ನಿಂದ ಟಿಕೆಟ್ ಪಡೆಯಲು ಸಾಕಷ್ಟು ಕಸರತ್ತು ನಡೆಸಿದ್ದರು. ಆದರೆ ತನ್ನ ಬಹಿರಂಗ ಹೇಳಿಕೆಗಳ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಸಮಾಧಾನಕ್ಕೂ ಕಾರಣವಾಗಿದ್ದರು. ಅಂತಿಮವಾಗಿ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಿತ್ತು. ಇದೀಗ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಕೆಜಿಎಫ್ ಬಾಬು ಪತ್ನಿ ಶಾಝಿಯಾ ತರನ್ನುಮ್‌ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts