

ಬಂಟ್ವಾಳ: ವಿದ್ಯಾರ್ಥಿಗಳು ಯಶಸ್ಸು ಪಡೆಯಬೇಕಾದರೆ ದೃಢ ಪ್ರಯತ್ನ ಮಾಡಬೇಕು. ವಿದ್ಯಾರ್ಥಿ ಬದುಕನ್ನು ವ್ಯಕ್ತಿತ್ವ ರೂಪಿಸಿಕೊಳ್ಳುವುದಕ್ಕೆ ಪೂರಕವಾಗಿಸಿಕೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ಹೇಳಿದರು.
ಬಂಟ್ವಾಳ ಸರ್ಕಾರಿ ಪಾಲಿಟೆಕ್ನಿಕ್‌ನ ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್‌ಕ್ರಾಸ್ ಘಟಕಗಳ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಮಾತನಾಡಿದರು.
ಪ್ರಾಂಶುಪಾಲ ನರಸಿಂಹ ಭಟ್ ಎಚ್.ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಭಗವಾನ್ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತಾಡಿದರು. ಕ್ರೀಡಾಧಿಕಾರಿ ರಿತಿಕಾ ಕೋಟ್ಯಾನ್ ಎಚ್. ವಾರ್ಷಿಕ ವರದಿ ಮಂಡಿಸಿದರು.
ಸಿವಿಲ್ ವಿಭಾಗ ಮುಖ್ಯಸ್ಥ ಮೋಹನ್‌ರಾಜ್ ಜಿ.ಎಸ್, ಸಿ.ಎಸ್ ವಿಭಾಗ ಮುಖ್ಯಸ್ಥೆ ಭುವನೇಶ್ವರಿ, ಎಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥ ಮತ್ತು ರೆಡ್‌ಕ್ರಾಸ್ ಸಂಯೋಜಕ ಉದಯ್ ಕುಮಾರ್, ಕಚೇರಿ ಅಧೀಕ್ಷಕ ಸುಧಾಕರ್ ಸಿ.ಎಸ್, ಪ್ರೇರಣಾ ಘಟಕದ ಸಂಯೋಜಕ ಶ್ರೀನಿವಾಸ ಎಂ.ಎಸ್, ಪ್ಲೇಸ್ಮೆಂಟ್ ಅಧಿಕಾರಿ ಮಹೇಶ್, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮ ಅಧಿಕಾರಿ ಭಾಸ್ಕರ್ ಎಲ್. ಮತ್ತು ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿಭಾಗಗಳ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಭಗವಾನ್ ಪ್ರಸಾದ್ ಸ್ವಾಗತಿಸಿದರು. ಮಹೇಶ್ ವಂದಿಸಿದರು. ಭಾಸ್ಕರ್ ಎಲ್.ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮ ನಡೆದವು.