ನೇಕಾರರ ಸಮಸ್ಯೆ ಬಿಚ್ಚಿಟ್ಟ ವೀಣಾ ಕಾಶಪ್ಪನವರ

It was Veena Kashapana who solved the problem of weavers
ಬಾಗಲಕೋಟೆ ಜಿಲ್ಲೆಯ ನೇಕಾರರ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಸಚಿವ ಶಿವಾನಂದ ಪಾಟೀಲ ಅವರನ್ನು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಭೇಟಿ ಮಾಡಿ ಚರ್ಚೆ ನಡೆಸಿದರು.
Published on

ಬಾಗಲಕೋಟೆ: ಜಿಲ್ಲೆಯ ನೇಕಾರರ ಸಮಸ್ಯೆಗಳ ಕುರಿತು ಸಚಿವ ಶಿವಾನಂದ ಪಾಟೀಲ ಎದುರು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಮನವರಿಕೆ ಮಾಡಿದರು.

ಈಚೆಗೆ ನೇಕಾರ ಹೋರಾಟಗಾರರ ಜತೆಗೆ ಸಚಿವರನ್ನು ಭೇಟಿ ಮಾಡಿದ ಅವರು, ವೃತ್ತಿಪರ ನೇಕಾರರಿಗೆ ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ಕಾರ್ಮಿಕ ಸೌಲಭ್ಯ ಜಾರಿ ಮಾಡಬೇಕು, ಉಚಿತ ವಿದ್ಯುತ್ ಕಲ್ಪಿಸಬೇಕು, ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಸಂಘಗಳಲ್ಲಿನ ನೇಕಾರರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ನೇಕಾರರು ವಾಸ ಮಾಡುವ ಜಾಗೆಗಳಿಗೆ ಹಕ್ಕುಪತ್ರ, ಸಿಟಿಎಸ್ ಉತಾರ ನೀಡಬೇಕು, ಜಾಗ ಇಲ್ಲದವರಿಗೆ ನಿವೇಶನ ನೀಡಬೇಕು, ನೇಕಾರರ ಉತ್ಪಾದನೆಗಳಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು, ಕಾವೇರಿ ಹ್ಯಾಂಡ್ ಲೂಮ್ ನಿಗಮಕ್ಕೆ ಸಂಬಂಧಪಟ್ಟಂತೆ ಹಕ್ಕು ಒತ್ತಾಯ ಈಡೇರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹೋರಾಟಗಾರ ಶಿವಲಿಂಗ ಟರಕಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net