PHOTOS| ಮದುವೆಗು ಮುಂಚೆ ಗಂಡು ಮಗುವಿಗೆ ಜನ್ಮ ನೀಡಿದ ಲಂಡನ್​ ಬ್ಯೂಟಿ ಆ್ಯಮಿ ಜಾಕ್ಸನ್​: ಮಗುವಿನ ಹೆಸರು ಹೀಗಿದೆ…

Latest News

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾಸ್ತವ್ಯ ಹೂಡಿದ ಶಾಲೆಯಲ್ಲಿ ಶಿಕ್ಷಕರಿಂದ ಮಹಾ ಪ್ರಮಾದ

ಚಾಮರಾಜನಗರ: ಸಚಿವರ ಬಳಕೆಗೆಂದು ಮೀಸಲಿಟ್ಟ ಶೌಚಗೃಹವನ್ನು ಶಾಲಾ ಮಕ್ಕಳ ಕೈಯಲ್ಲಿ ಸ್ವಚ್ಛಗೊಳಿಸುವ ಮೂಲಕ ಶಾಲಾ ಶಿಕ್ಷಕರು ಪ್ರಮಾದವೆಸಗಿರುವ ಘಟನೆ ರಾಜ್ಯದ ಗಡಿಭಾಗದ ಶಾಲೆಯೊಂದರಲ್ಲಿ...

ರಾಷ್ಟ್ರ ರಕ್ಷಣೆಗೆ ಪ್ರಾಣವನ್ನೇ ಪಣಕ್ಕಿಡುವ ಧೀರ ಯೋಧರಿಗಾಗಿ “ಐರನ್​ ಮ್ಯಾನ್​” ಉಡುಪು ಅಭಿವೃದ್ಧಿಪಡಿಸಿದ ಯುವಕ!

ವಾರಾಣಸಿ: ಹಾಲಿವುಡ್​ ಐರನ್​ ಮ್ಯಾನ್​ ಚಿತ್ರದಿಂದ ಸ್ಪೂರ್ತಿಗೊಂಡು ವಾರಾಣಸಿಯ ಖಾಸಗಿ ವಿಶ್ವವಿದ್ಯಾಲಯದ ಉದ್ಯೋಗಿಯೊಬ್ಬರು "ಐರನ್​ ಮ್ಯಾನ್​" ಉಡುಪನ್ನು ಅಭಿವೃದ್ಧಿಪಡಿಸಿ ಸುದ್ದಿಯಾಗಿದ್ದಾರೆ. ಎದುರಾಳಿಯೊಂದಿಗೆ ಸೆಣಸಾಡುವ...

ಐಟಿ-ಬಿಟಿ ಅಭಿವೃದ್ಧಿಗೆ ಸರ್ಕಾರದ ಸಹಕಾರ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ, ಬೆಂಗಳೂರು ಟೆಕ್ ಸಮಿಟ್​ಗೆ ಅದ್ದೂರಿ ಚಾಲನೆ

ಬೆಂಗಳೂರು: ಆವಿಷ್ಕಾರ, ಸೇವಾ ಕ್ಷೇತ್ರಗಳ ಜತೆಗೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಅಭಿವೃದ್ಧಿಗೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ....

ಬಿಐಎಸ್ ವರದಿ ಆತಂಕಕಾರಿ: ಜಲಮಂಡಳಿಗೆ ತಜ್ಞರ ಸಲಹೆ, ಗುಣಮಟ್ಟದ ನೀರಿಗೆ ನಾಗರಿಕರ ಆಗ್ರಹ

ಬೆಂಗಳೂರು: ಬೆಂಗಳೂರು ಜಲಮಂಡಳಿ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಶುದ್ಧವಲ್ಲ ಎಂಬುದು ಭಾರತೀಯ ಗುಣಮಟ್ಟ ಸಂಸ್ಥೆ (ಬಿಐಎಸ್) ನಡೆಸಿದ ಅಧ್ಯಯನದಲ್ಲಿ ಬಯಲಾಗಿದೆ. ಇದು...

ವೈದ್ಯರಿಂದ ಮಾತೃಹೃದಯದ ಸೇವೆ

ಬೆಳ್ತಂಗಡಿ: ವೈದ್ಯರು ಮಾನವೀಯತೆ ಹಾಗೂ ನಗುಮುಖದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆ ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ...

ನವದೆಹಲಿ: ಬಹುಭಾಷ ನಟಿ ಹಾಗೂ ಲಂಡನ್​ ಬ್ಯೂಟಿ ಆ್ಯಮಿ ಜಾಕ್ಸನ್​ ಮನೆಗೆ ಹೊಸ ಜೀವವೊಂದರ ಆಗಮನವಾಗಿದೆ. ಮದುವೆಗು ಮುನ್ನ ಗರ್ಭಿಣಿಯಾಗಿ ಎಲ್ಲರ ಹುಬ್ಬೇರುವಂತೆ ಮಾಡಿದ್ದ ಆ್ಯಮಿ, ಇದೀಗ ಗಂಡು ಮಗುವಿಗೆ ಜನ್ಮ ನೀಡಿದ್ದು, ಮದುವೆಗು ಮುಂಚೆಯೇ ತಾಯಿಯಾಗುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ತಮ್ಮ ಮಗುವನ್ನು ಸ್ವಾಗತ ಮಾಡುತ್ತಿರುವ ಫೋಟೊವೊಂದನ್ನು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಮಾಡಿರುವ ಆ್ಯಮಿ, ಆಡ್ರಿಯಾಸ್​ನನ್ನು ಈ ಪ್ರಪಂಚಕ್ಕೆ ಸ್ವಾಗತ ಮಾಡುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಫೋಟೊದಲ್ಲಿ ಆ್ಯಮಿ ಅವರು ಬೆಡ್​ ಮಲಗಿ ತಮ್ಮ ಮಗುವಿಗೆ ಹಾಲುಣಿಸುತ್ತಿದ್ದರೆ, ಭಾವಿ ಪತಿ ಜಾರ್ಜ್​ ಪನಯೋಟು, ಆ್ಯಮಿ ಹಣೆಗೆ ಮುತ್ತಿಡುತ್ತಿದ್ದಾರೆ. ಒಂದು ಗಂಟೆ ಹಿಂದಷ್ಟೇ ಫೋಟೊವನ್ನು ಅಪ್​ಲೋಡ್​ ಮಾಡಿದ್ದು, ಈವರೆಗೂ 3 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆ ಮಾಡಿದ್ದಾರೆ. ಸ್ಟಾರ್​ ದಂಪತಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಕೆಲ ದಿನಗಳ ಹಿಂದೆ ತಾಯಿಯಾಗುತ್ತಿರುವ ಆ್ಯಮಿಗಾಗಿ ಬೇಬಿ ಶೋವರ್‌ ಆಯೋಜಿಸಲಾಗಿತ್ತು. ಇದರ ಕೆಲ ಚಿತ್ರಗಳನ್ನು ಆ್ಯಮಿ ತನ್ನ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, ಗರ್ಭಿಣಿ ಆದ ದಿನದಿಂದ ಮಗು ಜನನ ಆಗುವರೆಗೂ ಆಗಾಗ ತಮ್ಮ ಬೇಬಿ ಬಂಪ್​ ಬೆಳವಣಿಗೆಯ ಫೋಟೊಗಳನ್ನು ಆ್ಯಮಿ ತಮ್ಮ ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್​ ಮಾಡುತ್ತಿದ್ದರು.

ಕಳೆದ ಮಾರ್ಚ್​ 31ರ ಯುಕೆಯಲ್ಲಿ ಆಚರಿಸುವ ತಾಯಂದಿರ ದಿನದಂದು ಆ್ಯಮಿ ಜಾಕ್ಸನ್ ತಾವು ತಾಯಿಯಾಗುವ ಮಾಹಿತಿಯನ್ನು ಬಹಿರಂಗಪಡಿಸಿದ್ದರು. ಹೊಸ ವರ್ಷದ ಆರಂಭದಲ್ಲಿಯೇ ಮಲ್ಟಿ ಮಿಲಿಯನೇರ್​ ಉದ್ಯಮಿ ಜಾರ್ಜ್​ ಪನಯೋಟು ಅವರೊಂದಿಗೆ ನಿಶ್ಚಿತಾರ್ಥವಾಗಿದ್ದ ಸುದ್ದಿಯನ್ನು ತಮ್ಮ ಇನ್​​ಸ್ಟಾಗ್ರಾಂನಲ್ಲಿ ಜಾಕ್ಸನ್​ ಹಂಚಿಕೊಂಡು ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದರು. ಅಲ್ಲದೆ, ನಿಶ್ಚಿತಾರ್ಥದ ಬಳಿಕ ಆಫ್ರಿಕಾ ಪ್ರವಾಸ ಮಾಡಿ ಸಖತ್​ ಎಂಜಾಯ್​ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ಪೋಟೋಗಳನ್ನು ಹಂಚಿಕೊಂಡಿದ್ದರು.

ಆ್ಯಮಿ ಹಾಗೂ ಜಾರ್ಜ್​ 2020ರಲ್ಲಿ ಗ್ರೀಸ್​ನಲ್ಲಿ ಸಪ್ತಪದಿ ತುಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. (ಏಜೆನ್ಸೀಸ್​)

View this post on Instagram

Our Angel, welcome to the world Andreas ?

A post shared by Amy Jackson (@iamamyjackson) on

View this post on Instagram

Honeybu-mp ?

A post shared by Amy Jackson (@iamamyjackson) on

- Advertisement -

Stay connected

278,592FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...