ಕಟಕ್: ಫೆಬ್ರವರಿ 06ರಂದು ಇಂಗ್ಲೆಂಡ್ ವಿರುದ್ಧ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆಲ್ರೌಂಡ್ ಪ್ರದರ್ಶನದ ಫಲವಾಗಿ 4 ವಿಕೆಟ್ಗಳ ಜಯ ಕಂಡಿದ್ದ ಟೀಮ್ ಇಂಡಿಯಾ ಕಟಕ್ನಲ್ಲಿ ನಡೆಯಲಿರುವ ಎರಡನೇ ಮ್ಯಾಚ್ನಲ್ಲಿ ಗೆದ್ದು ಸರಣಿಯನ್ನು ವಶಪಡಿಸಿಕೊಳ್ಳುವ ಇರಾದೆಯಲ್ಲಿದೆ. ಮೊದಲ ಪಂದ್ಯದ ಸೋಲಿನಿಂದ ಹೊರಬಂದು ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಬೇಕೆಂದು ಇಂಗ್ಲೆಂಡ್ ತಯಾರಿ ನಡೆಸುತ್ತಿದ್ದು, ಭಾನುವಾರ (ಫೆಬ್ರವರಿ 09) ಪಂದ್ಯದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.
ಸರಣಿಯ ಎರಡನೇ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಟೀಮ್ ಇಂಡಿಯಾಗೆ ಸಿಹಿಸುದ್ದಿಯೊಂದು ಲಭಿಸಿದ್ದು, ಮೊಕಾಲಿನ ಗಾಯದಿಂದಾಗಿ ಮೊದಲ ಪಂದ್ಯ ತಪ್ಪಿಸಿಕೊಂಡಿದ್ದ ವಿರಾಟ್ ಕೊಹ್ಲಿ (Virat Kohli) ಎರಡನೇ ಮ್ಯಾಚ್ನಲ್ಲಿ ವಾಪಸ್ ಆಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಈ ವಿಚಾರವನ್ನು ಟೀಮ್ ಇಂಡಿಯಾದ ಆಟಗಾರ ಶುಭಮನ್ ಗಿಲ್ ಖಚಿತಪಡಿಸಿದ್ದಾರೆ.
ಬಲಮೊಣಕಾಲಿನ ನೋವಿನ ಸಮಸ್ಯೆಗೆ ತುತ್ತಾಗಿರುವ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಪ್ರವಾಸಿ ಇಂಗ್ಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯಕ್ಕೆ ಲಭ್ಯವಾಗಲಿದ್ದಾರೆ ಎಂದು ಉಪನಾಯಕ ಶುಭಮಾನ್ ಗಿಲ್ ಸ್ಪಷ್ಟಪಡಿಸಿದ್ದಾರೆ. ನಾಗುರದಲ್ಲಿ ನಡೆದ ಮೊದಲ ಏಕದಿನದ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಗಿಲ್, ವಿರಾಟ್ ಕೊಹ್ಲಿ ಅವರ ಮೊಣಕಾಲಿನ ಸಮಸ್ಯೆ ಏನೂ ಗಂಭೀರವಾಗಿಲ್ಲ. ಬುಧವಾರ ಅಭ್ಯಾಸದ ಅವಧಿಯಲ್ಲಿ ಚೆನ್ನಾಗಿದ್ದರು. ಆದರೆ ಗುರುವಾರ ಬೆಳಗ್ಗೆ ಮೊಣಕಾಲಿನಲ್ಲಿ ಸ್ವಲ್ಪ ಊತ ಕಂಡುಬಂದಿದೆ. ಇದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಮೊದಲ ಪಂದ್ಯದಿಂದ ಅವರು ಹೊರಗುಳಿದರು. ಎರಡನೇ ಪಂದ್ಯಕ್ಕೆ ಖಂಡಿತ ಲಭ್ಯವಾಗುತ್ತಾರೆ. ಇದರೊಂದಿಗೆ ಕೊಹ್ಲಿ ಫಿಟ್ನೆಸ್ ಬಗೆಗಿನ ವದಂತಿಗಳಿಗೆ ಶುಭಮನ್ ಗಿಲ್ ತೆರೆ ಎಳೆದಿದ್ದಾರೆ.
ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಗಾಯಕ್ಕೆ ತುತ್ತಾಗಿದ್ದ ವಿರಾಟ್ ಕೊಹ್ಲಿ (Virat Kohli) ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಎರಡನೇ ಏಕದಿನ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ. ಚಾಂಪಿಯನ್ಸ್ ಟ್ರೋಫಿ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗುವುದರಿಂದ ಕೊಹ್ಲಿ ಎರಡನೇ ಏಕದಿನ ಪಂದ್ಯವನ್ನು ಆಡುವುದು ಅತ್ಯವಶ್ಯಕವಾಗಿದೆ. ಏಕೆಂದರೆ ಪ್ರಸ್ತುರ ರನ್ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿ ತಮ್ಮ ಫಾರ್ಮ್ಗೆ ಮರಳಲು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಆಡುವುದು ಅತ್ಯವಶ್ಯಕವಾಗಿದೆ. ಹೀಗಾಗಿ ಉಳಿದಿರುವ ಎರಡು ಪಂದ್ಯಗಳಲ್ಲಿ ಕೊಹ್ಲಿ ಆಡುವ ಮೂಲಕ ತಮ್ಮ ಹಳೆಯ ಲಯಕ್ಕೆ ಮರಳಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.
ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಂಡಕ್ಕೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಖಚಿತವಾಗುತ್ತಿದ್ದಂತೆ ಆಡುವ 11ರ ಬಳಗದಲ್ಲಿ ಬದಲಾವಣೆ ಖಾತ್ರಿಯಾಗಿದೆ. ಅದರಂತೆ ಏಕದಿನ ಮಾದರಿಯಲ್ಲಿ ಪದಾರ್ಪಣೆ ಮಾಡಿದ್ದ ಯಶಸ್ವಿ ಜೈಸ್ವಾಲ್ ಕೊಹ್ಲಿಗೆ ಸ್ಥಾನ ಬಿಟ್ಟುಕೊಡುವುದು ಪಕ್ಕಾ ಎಂದು ಹೇಳಲಾಗಿದೆ. ಇನ್ನೂ ಕಳೆದ ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಶ್ರೇಯಸ್ ಅಯ್ಯರ್ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದು, ಜೈಸ್ವಾಲ್ ಬದಲಿಗೆ ವಿರಾಟ್ ಕೊಹ್ಲಿಗೆ ಅವಕಾಶ ನೀಡುವುದು ಪಕ್ಕಾ ಆಗಿದೆ.
ಸ್ಥಳೀಯರೊಂದಿಗೆ Cricket ಆಡಿದ ನಾಗಾಸಾಧುಗಳು; ವೈರಲ್ ವಿಡಿಯೋ ನೋಡಿದ ನೆಟ್ಟಿಗರ ರಿಯಾಕ್ಷನ್ ಮಾತ್ರ…
ಇಂದು ದೆಹಲಿ Election Result; ಹ್ಯಾಟ್ರಿಕ್ ನಿರೀಕ್ಷೆಯಲ್ಲಿ ಆಪ್, 25 ವರ್ಷಗಳ ಅರಳಲಿದೆಯಾ ಮುದುಡಿದ ತಾವರೆ?