Tuesday, 20th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

2.0 ಬಿಡುಗಡೆಗೆ ದಿನಾಂಕ ಫಿಕ್ಸ್

Thursday, 12.07.2018, 3:03 AM       No Comments

‘ಸೂಪರ್​ಸ್ಟಾರ್’ ರಜನಿಕಾಂತ್ ಅಭಿಮಾನಿಗಳಿಗೆ ಕೊನೆಗೂ ‘2.0’ ಚಿತ್ರತಂಡ ಸಿಹಿಸುದ್ದಿ ನೀಡಿದೆ. ಪದೇಪದೆ ಚಿತ್ರದ ಬಿಡುಗಡೆಯನ್ನು ಮುಂದೂಡುತ್ತಲೇ ಬಂದಿದ್ದ ಚಿತ್ರತಂಡ ಅಂತಿಮವಾಗಿ ರಿಲೀಸ್ ದಿನಾಂಕವನ್ನು ಘೋಷಿಸಿಕೊಂಡಿದೆ. ನವೆಂಬರ್ 29ಕ್ಕೆ ‘2.0’ ಪ್ರೇಕ್ಷಕರೆದುರಿಗೆ ಬರುವುದು ಪಕ್ಕಾ ಎಂದಿದ್ದಾರೆ. ರಿಲೀಸ್ ದಿನಾಂಕದ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ ಶಂಕರ್, ‘ವಿಎಫ್​ಎಕ್ಸ್ ಕಂಪನಿಗಳು ಇನ್ನು ಎರಡ್ಮೂರು ತಿಂಗಳಲ್ಲಿ ಗ್ರಾಫಿಕ್ಸ್ ಕೆಲಸಗಳನ್ನು ಮುಗಿಸಿಕೊಡಲಿವೆ. ಹಾಗಾಗಿ ನ. 29ರಂದೇ ನಮ್ಮ ಚಿತ್ರ ತೆರೆಕಾಣಲಿದೆ’ ಎಂದು ಬರೆದುಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ನಿರ್ವಣವಾಗುತ್ತಲೇ ಇರುವ ‘2.0’ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಚಿತ್ರದಲ್ಲಿ ಗ್ರಾಫಿಕ್ಸ್ ದೃಶ್ಯಗಳು ಹೆಚ್ಚಿರುವುದರಿಂದ ವಿಎಫ್​ಎಕ್ಸ್​ನಲ್ಲೇ ಹೆಚ್ಚು ಸಮಯ ಕಳೆಯುತ್ತಿದೆ. ಇದೀಗ ನಿರ್ದೇಶಕರ ಪ್ರಕಾರ ಆ ಎಲ್ಲ ಕೆಲಸಗಳು ಕೊನೇ ಹಂತಕ್ಕೆ ಬಂದಿವೆ. ಇನ್ನು ಕೆಲವೇ ತಿಂಗಳಲ್ಲಿ ‘2.0’ ಸೆನ್ಸಾರ್ ಪ್ರಮಾಣಪತ್ರ ಪಡೆದು, ವಿಶ್ವಾದ್ಯಂತ ರಿಲೀಸ್ ಆಗಲಿದೆ. ಲೈಕಾ ಸಂಸ್ಥೆ ಬಂಡವಾಳ ಹೂಡುತ್ತಿದ್ದು, ಈಗಾಗಲೇ 400 ಕೋಟಿ ರೂ. ವ್ಯಯಿಸಿದೆ. ರಜನಿಕಾಂತ್ ಮತ್ತು ಬಾಲಿವುಡ್ ನಟ ಅಕ್ಷಯ್ಕುಮಾರ್ ಮುಖ್ಯಭೂಮಿಕೆ ನಿಭಾಯಿಸಿದರೆ, ಆಮಿ ಜಾಕ್ಸನ್ ಸೇರಿ ಹಲವರು ತಾರಾಗಣದಲ್ಲಿ ಇದ್ದಾರೆ. ಏಜೆನ್ಸೀಸ್

Leave a Reply

Your email address will not be published. Required fields are marked *

Back To Top