More

    ದೆಹಲಿ ವಾಯುಮಾಲಿನ್ಯ; ಹೀಗೆ ಆದಲ್ಲಿ ಮುಂದಿನ ದಿನಗಳಲ್ಲಿ ಕಷ್ಟವಾಗುತ್ತದೆ: ಸುಪ್ರೀಂ ಕೋರ್ಟ್​

    ನವದೆಹಲಿ: ದೆಹಲಿಯಲ್ಲಿ ಗಾಳಿಯ ಗುಣಮಟ್ಟವು ದಿನದಿಂದ ದಿನಕ್ಕೆ ತೀವ್ರವಾಗಿ ಹದಗೆಡುತ್ತಿದ್ದು, ನೆರೆಯ ರಾಜ್ಯಗಳಾದ ಪಂಜಾಬ್, ಹರಿಯಾಣ, ಉತ್ತರಪ್ರದೇಶ, ರಾಜಸ್ಥಾನದಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕೃಷಿ ತ್ಯಾಜ್ಯ ಸುಡುವುದನ್ನು ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

    ಕರಷಿ ತ್ಯಾಜ್ಯ ಸುಡುವಿಕೆ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್​.ಕೆ. ಕೌಲ್​ ಹಾಗೂ ಸುಧಾಂಶು ದುಲಿಯಾ ಅವರಿದ್ದ ದ್ವಿಸದಸ್ಯ ಪೀಠವು ದೆಹಲಿಯಲ್ಲಿ ವಾಯು ಗುಣಮಟ್ಟವು ಈ ರೀತಿ ಹಾಳಾಗಲು ಬಿಡಬಾರುದ ಎಂದು ಅಭಿಪ್ರಾಯಪಟ್ಟಿದೆ.

    ಇದನ್ನೂ ಓದಿ: ಕ್ರಿಕಟ್ ದಿಗ್ಗಜನ ದಾಖಲೆ ಮುರಿದ ಬೆನ್ನಲ್ಲೇ ಕೊಹ್ಲಿಯನ್ನು ಸ್ವಾರ್ಥಿ ಎಂದ ಪಾಕ್ ಮಾಜಿ ಕ್ರಿಕೆಟಿಗ; ವ್ಯಾಪಕ ಟೀಕೆ

    ದೆಹಲಿ ಹಾಗೂ ಸುತ್ತಮುತ್ತಲಿನ ರಾಜ್ಯಗಳಲ್ಲಿ ಪ್ತಿ ಚಳಿಗಾಲದ ಸಮಯದಲ್ಲಿ ಕೃಷಿ ತ್ಯಾಜ್ಯ ಸುಡುವುದರಿಂದ ದೆಹಲಿಯಲ್ಲಿನ ವಾಯು ಮಾಲಿನ್ಯ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಕೃಷಿ ತ್ಯಾಜ್ಯ ಸುಡುವುದನ್ನು ರಾಜ್ಯ ಸರ್ಕಾರಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ನೀವು ಯಾವ ರೀತಿಯ ಕ್ರಮ ಕೈಗೊಳ್ಳುತ್ತೀರಿ ಎಂಬುದು ನಮಗೆ ಬೇಡವಾದ ವಿಚಾರ ತಕ್ಷಣವೇ ಏನಾದರೂ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.

    ಪಾಲಿಕೆ ಘನತ್ಯಾಜ್ಯ ಸುಡದಂತೆ ದೆಹಲಿ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ನ್ಯಾಯಮೂರ್ತಿಗಳಾದ ಎಸ್​.ಕೆ. ಕೌಲ್​ ಹಾಗೂ ಸುಧಾಂಶು ದುಲಿಯಾ ಅವರಿದ್ದ ದ್ವಿಸದಸ್ಯ ಪೀಠವು ದೆಹಲಿ ವಾಯುಮಾಲಿನ್ಯದ ಕುರಿತು ಅಭಿಪ್ರಾಯಪಟ್ಟಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts