More

  ಇಟ್ಟಿಗಿಯ ಆಂಜನೇಯ ಸ್ವಾಮಿ ರಥೋತ್ಸವ ಸಂಪನ್ನ

  ಹೂವಿನಹಡಗಲಿ: ತಾಲೂಕಿನ ಇಟ್ಟಿಗಿಯ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಶನಿವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮ ಸಡಗರದಿಂದ ಜರುಗಿತು.

  ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ತಂದು ರಥದ ಸುತ್ತ ಪ್ರದಕ್ಷಿಣೆ ಹಾಕಿಸಿ, ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಧಾರ್ಮಿಕ ಪೂಜೆಗಳ ಬಳಿಕ ರಥೋತ್ಸವ ಚಾಲನೆ ಪಡೆದು, ಸ್ವಾಮಿಯ ಪಾದಕಟ್ಟೆಯವರೆಗೂ ಎಳೆದು ನಂತರ ಸ್ವಸ್ಥಾನಕ್ಕೆ ತಲುಪಿಸಲಾಯಿತು.

  ಹರಕೆ ಹೊತ್ತ ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ಬಗೆಯ ಹೂವುಗಳಿಂದ ರಥವನ್ನು ಅಲಂಕರಿಸಲಾಗಿತ್ತು. ಸಮಾಳ, ನಂದಿಕೋಲು ಸೇರಿದಂತೆ ಸಕಲ ಮಂಗಳವಾದ್ಯಗಳು ರಥೋತ್ಸವಕ್ಕೆ ಮೆರುಗು ತಂದವು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts