More

    ಸಿಎಎ, ಎನ್​ಆರ್​ಸಿ ಜಾರಿಗೆ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ವಿವರ ಬಹಿರಂಗಗೊಳಿಸಲು ಸೂಚಿಸಲು ಸುಪ್ರೀಂಗೆ ಮನವಿ

    ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಜಾರಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಬಹಿರಂಗ ಪಡಿಸಲಿ ಎಂದು ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್​ ಯೂನಿಯನ್​ ಮುಸ್ಲಿಂ ಲೀಗ್​ (ಐಯುಎಂಎಲ್​) ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದೆ.

    ಸಿಎಎ ಮತ್ತು ಎನ್​ಆರ್​ಸಿ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಐಯುಎಂಎಲ್​, ಗುರುವಾರ ನಡೆದ ವಿಚಾರಣೆಯಲ್ಲಿ ಸಿಎಎ ಮತ್ತು ಎನ್​ಆರ್​ಸಿಗಳನ್ನು ಕಾರ್ಯಗತಗೊಳಿಸುವುದನ್ನು ನಿಲ್ಲಿಸಲು ಕೇಂದ್ರಕ್ಕೆ ಸೂಚಿಸಬೇಕೆಂದು ಮನವಿ ಮಾಡಿಕೊಂಡಿತು.

    ಸುಪ್ರೀಂ ಕೋರ್ಟ್​ನಲ್ಲಿ ವಾದ ಮಂಡಿಸಿದ ಐಯುಎಂಎಲ್, ಕಾಯ್ದೆಗಳ ಜಾರಿ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟಿಕರಣ ನೀಡಬೇಕು. ದೇಶಾದ್ಯಂತ ಜಾರಿಯಾಗಲು ಕೈಗೊಂಡಿರುವ ಬಗ್ಗೆ ಮಾಹಿತಿ ನೀಡಬೇಕು ಮತ್ತು ಎನ್​ಆರ್​ಸಿ ಮತ್ತು ಸಿಎಎ ನಡುವಿನ ಸಂಬಂಧ ಏನು ಎಂಬುದನ್ನು ಸ್ಪಷ್ಟಪಡಿಸಲಿ ಎಂದಿತು.

    ಕೇಂದ್ರ ಸರ್ಕಾರದ ಸಚಿವರು ಮತ್ತು ಪ್ರಧಾನಿ ಮೋದಿ ಅವರೂ ಎನ್​ಆರ್​ಸಿ ಮತ್ತು ಸಿಎಎಗೆ ಒಂದಕ್ಕೊಂದು ಸಂಬಂಧವಿಲ್ಲ ಎಂದು ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ಆದರೆ ವಿರೋಧ ಪಕ್ಷಗಳು ಬಗ್ಗೆ ಇನ್ನೂ ವಿರೋಧ ವ್ಯಕ್ತಪಡಿಸುತ್ತಲೇ ಬಂದಿವೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts