More

    ಅಕ್ರಮ ಹಣ ವರ್ಗಾವಣೆ ಪ್ರಕರಣ: ಹೆಸರು ಕೈಬಿಡಲು ಹೈಕೋರ್ಟ್‌ ಮೊರೆಹೋದ ಜಾಕ್ವೆಲಿನ್

    ನವದೆಹಲಿ: 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಸಲ್ಲಿಸಿರುವ ಕ್ರಿಮಿನಲ್ ಮೊಕದ್ದಮೆ ಮತ್ತು ಪೂರಕ ಆರೋಪಪಟ್ಟಿಯಿಂದ ತನ್ನ ಹೆಸರನ್ನು ಕೈಬಿಡುವಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

    ಇದನ್ನೂ ಓದಿ: ಅದು ಕಾರ್​ ಆಕ್ಸಿಡೆಂಟ್​ ಕೇಸಲ್ಲ, ಅದರ ಹಿಂದಿತ್ತು ಕಾನ್​ಸ್ಟೇಬಲ್​ ಕರಾಮತ್ತು..!
    ಆರೋಪಿ ಸುಕೇಶ್ ಚಂದ್ರಶೇಖರ್ ಅವರಿಗೆ ಸಂಬಂಧಿಸಿದ 200 ಕೋಟಿ ರೂ.ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿ ದಾಖಲಿಸಿರುವ ಪ್ರಕರಣದಲ್ಲಿ ಜಾಕ್ವೆಲಿನ್ ಫೆರ್ನಾಂಡಿಸ್ ಸಹ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆ ಮತ್ತು ಇಡಿ ಸಲ್ಲಿಸಿದ ಪೂರಕ ಆರೋಪಪಟ್ಟಿಯಿಂದ ತನ್ನ ಹೆಸರನ್ನ ಕೈಬಿಡುವಂತೆ ಜಾಕ್ವೆಲಿನ್ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

    ಇಡಿ ದಾಖಲಿಸಿರುವ ಪ್ರಕರಣದಲ್ಲಿ ಜಾಕ್ವೆಲಿನ್ ಫೆರ್ನಾಂಡಿಸ್ ಸಹ ಆರೋಪಿಯಾಗಿದ್ದಾರೆ. ಆದರೆ ಈ ಮೊದಲು ದೆಹಲಿ ಪೊಲೀಸರು ದಾಖಲಿಸಿದ್ದ ಈ ಸುಲಿಗೆ ಪ್ರಕರಣದಲ್ಲಿ ಜಾಕ್ವೆಲಿನ್ ಅವರನ್ನು ಸಾಕ್ಷಿಯಾಗಿ ಹೆಸರಿಸಲಾಗಿತ್ತು.‌

    ಆರೋಪಿ ಸುಕೇಶ್, ರೆಲಿಗೇರ್ ಎಂಟರ್‌ಪ್ರೈಸಸ್ ಮಾಜಿ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರಿಂದ ಹಣ ಸುಲಿಗೆ ಮಾಡುತ್ತಿದ್ದನು ಎಂದು ಆರೋಪಿಸಿ, ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯೂ) ವಂಚನೆ ಪ್ರಕರಣ ದಾಖಲಿಸಿತ್ತು. ಆನಂತರ ಈ ಪ್ರಕರಣ ಇಡಿ ಅಂಗಳ ತಲುಪಿತು.

    ಆರೋಪಿ ಸುಕೇಶ್‌ಗೆ ತಾನು ಯಾವುದೇ ರೀತಿಯಲ್ಲಿ ಸಹಾಯ ಮಾಡಿಲ್ಲ, ಅಷ್ಟಕ್ಕೂ ಈ ಪ್ರಕರಣದಲ್ಲಿ ಜಾಕ್ವೆಲಿನ್ ಅವರನ್ನು ಸಾಕ್ಷಿಯಾಗಿ ಹೆಸರಿಸಲಾಗಿತ್ತು ಎಂದು ಮನವಿಯಲ್ಲಿ ತಿಳಿಸಲಾಗಿದೆ.

    ಚೀನಾದಲ್ಲಿ ಪ್ರಬಲ ಭೂಕಂಪ: 111 ಜನರು ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts