ಬುಧವಾರ ಜಗದ್ಗುರು ರೇಣುಕಾಚಾರ್ಯ ಜಯಂತಿ; ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ

renuka
Published on

ಬೆಂಗಳೂರು: ಶ್ರೀಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪಾಲ್ಗುಣ ಶುದ್ಧ ತ್ರಯೋದಶಿಯಂದು ಬುಧವಾರ (ಮಾ.12) ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಜೆ.ಸಿ.ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಎಡೆಯೂರು ಕ್ಷೇತ್ರದ ಬಾಳೆಹೊನ್ನೂರು ಮಠದ ಶ್ರೀರೇಣುಕ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮುಖಂಡರು ಭಾಗಿಯಾಗಲಿದ್ದಾರೆ.

ಸಭಾ ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 10.30ಕ್ಕೆ ಕಾರ್ಪೋರೇಷನ್ ಮುಂಭಾಗದ ಹಡ್ಸನ್ ವೃತ್ತದಿಂದ ಸಕಲ ಮಂಗಲವಾದ್ಯಗಳೊಂದಿಗೆ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರ ಇರಿಸಿದ ಬೆಳ್ಳಿ ರಥದ ಮೆರವಣಿಗೆ ನಡೆಯಲಿದೆ. ನಂತರ ಗಾನಸುಧೆ ಭಜನಾ ಮಂಡಳಿಯ ನಾದಭಾಸ್ಕರ ಶಿವಶಂಕರ ಶಾಸಿ ಮತ್ತು ತಂಡದವರಿಂದ ಭಕ್ತಿಗಾಯನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ರಾಜಾಜಿನಗರದ ಪ್ರವೇಶ ದ್ವಾರದಲ್ಲಿರುವ ಶ್ರೀಜಗದ್ಗುರು ರೇಣುಕಾಚಾರ್ಯರ ಕಂಚಿನ ಪುತ್ಥಳಿಗೆ ಬೆಳಗ್ಗೆ 8 ಗಂಟೆಗೆ ಅಭಿಷೇಕ, ಅಲಂಕಾರ ಹಾಗೂ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net