More

    ಅಂಧರಾಗಿದ್ದರೂ 100ಕ್ಕೂ ಹೆಚ್ಚು ಪುಸ್ತಕಗಳ ಬರೆದ ಜಗದ್ಗುರು; ಉರ್ದು ಕವಿ ಗುಲ್ಜಾರ್​ ಅವರಿಗೆ ಜ್ಞಾನಪೀಠ ಪ್ರಶಸ್ತಿ ಗೌರವ

    ನವದೆಹಲಿ: ಖ್ಯಾತ ಉರ್ದು ಕವಿ ಮತ್ತು ಗೀತರಚನೆಕಾರ ಗುಲ್ಜಾರ್, ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 23 ರ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಗುಲ್ಜಾರ್ ಅವರು ಹಿಂದಿ ಸಿನಿಮಾ ಮತ್ತು ಕಾವ್ಯಕ್ಕೆ ನೀಡಿದ ಕೊಡುಗೆಗಳಿಗಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಮಭದ್ರಾಚಾರ್ಯರು ಅಂಧರಾಗಿದ್ದರೂ ಸಹ ಆಳವಾದ ಸಂಸ್ಕೃತ ವಿದ್ವಾಂಸರಾಗಿದ್ದಾರೆ. ಆಯ್ಕೆ ಸಮಿತಿಯು ಆಯಾ ಕ್ಷೇತ್ರಗಳಲ್ಲಿ ಅವರ ಅಸಾಧಾರಣ ಕೆಲಸವನ್ನು ಗುರುತಿಸಿದೆ. ಈ ಹಿಂದೆ, ಗುಲ್ಜಾರ್ ಅವರು ಸಾಹಿತ್ಯ ಅಕಾಡೆಮಿ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಪಡೆದಿದ್ದಾರೆ.

    ಗುಲ್ಜಾರ್ ಅವರು ಪ್ರಸ್ತುತ ಕಾಲದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂದು ಗುರುತಿಸಲ್ಪಟ್ಟಿದ್ದಾರೆ, ಹಿಂದಿ ಚಿತ್ರರಂಗದಲ್ಲಿ ಅವರ ಕೆಲಸಕ್ಕಾಗಿ ಮೆಚ್ಚುಗೆ ಪಡೆದಿದ್ದಾರೆ. ಅವರು ಈ ಹಿಂದೆ 2002 ರಲ್ಲಿ ಉರ್ದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು 2004 ರಲ್ಲಿ ಪದ್ಮಭೂಷಣ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಅಲ್ಲದೆ, ಅವರು ಹಿಂದಿ ಚಿತ್ರರಂಗದಲ್ಲಿನ ವಿವಿಧ ಕೆಲಸಗಳಿಗಾಗಿ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

    ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥರಾಗಿದ್ದು, ಚಿತ್ರಕೂಟದಲ್ಲಿ ನೆಲೆಸಿರುವ ರಾಮಭದ್ರಾಚಾರ್ಯರು ಪ್ರಮುಖ ಹಿಂದೂ ಆಧ್ಯಾತ್ಮಿಕ ನಾಯಕ, ಶಿಕ್ಷಣತಜ್ಞ ಮತ್ತು 100ಕ್ಕೂ ಹೆಚ್ಚು ಪುಸ್ತಕಗಳ ಲೇಖಕರಾಗಿದ್ದಾರೆ. ಹುಟ್ಟಿನಿಂದಲೇ ಕುರುಡರಾಗಿದ್ದರೂ, ಜಗದ್ಗುರುಗಳು ಸಂಸ್ಕೃತ ಭಾಷೆ ಮತ್ತು ವೇದ-ಪುರಾಣಗಳ ಆಳವಾದ ವಿದ್ವಾಂಸರಾಗಿದ್ದಾರೆ.

    ಸಂಸ್ಕೃತ ಸಾಹಿತ್ಯ ಜಗದ್ಗುರು ರಾಮಭದ್ರಾಚಾರ್ಯ ಮತ್ತು ಖ್ಯಾತ ಉರ್ದು ಸಾಹಿತಿ ಶ್ರೀ ಗುಲ್ಜಾರ್ ಅವರಿಗೆ 2023ನೇ ಸಾಲಿನ ಪ್ರತಿಷ್ಠಿತ ಪ್ರಶಸ್ತಿಯನ್ನು ಎರಡು ಭಾಷೆಯ ಖ್ಯಾತ ಲೇಖಕರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಜ್ಞಾನಪೀಠ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. 2022 ರಲ್ಲಿ, ಗೋವಾದ ಲೇಖಕ ದಾಮೋದರ್ ಮೌಜೊ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

     

    ಒಂದೇ ರೂಪಾಯಿಯಲ್ಲಿ ಹೃದಯದ ಆರೋಗ್ಯ ಕಾಪಾಡಿಕೊಳ್ಳಿ; ಪ್ಯಾರಾಲೈಸಿಸ್​ನಿಂದಲೂ ಪಾರಾಗಿರಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts