

ಬೆಂಗಳೂರು: ಈಗಾಗಲೇ ಸಾಕಷ್ಟು ವಿವಾದಗಳಿಂದಲೇ ಸದ್ದು ಮಾಡಿರುವ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ 11ನೇ ಆವೃತ್ತಿಯೂ (Bigg Boss 11th Season) ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆಯುತ್ತಿದೆ. ಈಗಾಗಲೇ ಸ್ಫರ್ಧಿಗಳ ನಡುವಿನ ಕಿತ್ತಾಟ ಹಾಗೂ ಅವಾಚ್ಯ ಶಬ್ದಗಳ ಬಳಕೆಯಿಂದಲೇ ಕಾರ್ಯಕ್ರಮವು ಹೆಚ್ಚು ಸುದ್ದಿಯಲ್ಲಿದ್ದು, ಒಂದಲ್ಲ ಒಂದು ಸಂಕಷ್ಟ ಎದುರಿಸುತ್ತಿದೆ. ಇದರಲ್ಲಿ ಪ್ರಮುಖವಾಗಿ ಸದ್ದು ಮಾಡಿದವರು ಜಗದೀಶ್ (Jagadish) ಎಂದರೆ ತಪ್ಪಾಗಲಾರದು. ಮನೆಯ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡ ಪರಿಣಾಮ ಜಗದೀಶ್ (Jagadish) ಹಾಗೂ ಸ್ಫರ್ಧಿ ರಂಜಿತ್ರನ್ನು (Ranjith) ಬಿಗ್ಬಾಸ್ನಿಂದ (Bigg Boss) ಹೊರಹಾಕಲಾಗಿದ್ದು, ಈ ಸುದ್ದಿ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.
ಕಾರ್ಯಕ್ರಮ ಶುರುವಾದಾಗಿನಿಂದಲೂ ಸುದ್ದಿಯಲ್ಲಿರುವ ಜಗದೀಶ್ (Jagadish) ಅವರು ಮೊದಲ ವಾರ ಬಿಗ್ಬಾಸ್ಗೆ (Bigg Boss) ಅವಾಜ್ ಹಾಕಿ ಸವಾಲು ಎಸೆಯುವ ಮೂಲಕ ಸದ್ದು ಮಾಡಿದ್ದರು. ಎರಡನೇ ವಾರ ಸಂಪೂರ್ಣ ಲವರ್ ಬಾಯ್ ಆಗಿ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಿದ್ದ ಜಗದೀಶ್ ಮೂರನೇ ವಾರ ಕೆಲವು ಮಹಿಳಾ ಸ್ಫರ್ಧಿಗಳಿಗೆ (Women Contestants) ಅವಾಚ್ಯವಾಗಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ವಿಚಾರವಾಗಿ ಜಗದೀಶ್ ಹಾಗೂ ರಂಜಿತ್ ಕೈ ಕೈ ಮಿಲಾಯಿಸಿದ್ದು, ಇವರಿಬ್ಬರು ಬಿಗ್ಬಾಸ್ (Bigg Boss) ಮನೆಯಿಂದ ಔಟ್ ಆಗಿದ್ದಾರೆ. ಇದೀಗ ಬಿಗ್ಬಾಸ್ ಮನೆಯಿಂದ ಹೊರಗೆ ಬಂದಿರುವ ಜಗದೀಶ್, ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.
ಬಿಗ್ಬಾಸ್ (BiggBoss) ಒಂದು ವ್ಯಕ್ತಿಯ ಜೀವನವನ್ನು ತೋರಿಸುವಂತ ಕನ್ನಡಿ. ನಾನು ಸಹ ಅಲ್ಲಿ ಸ್ಪರ್ಧಿಸಿದಾಗ ನನ್ನ ನಿಜವಾದ ಮುಖ ನೋಡಿದಾಗಲೂ ನನಗೆ ಆಶ್ಚರ್ಯ ಆಯ್ತು. ನನ್ನಲ್ಲಿ ಅಡಗಿದ ಕೋಪ, ಪ್ರತಿಭೆ ಆಗಿರಬೋದು ಎಲ್ಲವೂ ಅರ್ಥವಾಗಿದೆ. ನಿಜವಾಗಲೂ ನಾವು ಅದೃಷ್ಟವಂತರು. ಎಷ್ಟೋ ಕೋಟಿ ಜನಗಳ ಮಧ್ಯೆ ಬಿಗ್ಬಾಸ್ಗೆ (Bigg Boss) ಭಾಗಿಯಾಗುವ ಅವಕಾಶ ನಮ್ಮ ಅದೃಷ್ಟ. ಅದನ್ನು ವಿಭಿನ್ನವಾಗಿ ತೋರಿಸುವ ಮೀಡಿಯಾ, ಎಂಜಾಯ್ ಮಾಡಿದಂತೆ ವೀಕ್ಷಕರು. ನನ್ನ ಫ್ಯಾನ್ಸ್‌ಗೂ ವಂದನೆಗಳು. ನಾನು ಬಿಗ್ಬಾಸ್ (Bigg Boss) ಮಿಸ್ ಮಾಡಿಕೊಳ್ತೇನೆ.
ನೂರಾರು ಕ್ಯಾಮೆರಾ, ಸಾವಿರಾರು ಬಿಗ್ಬಾಸ್ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್ಬಾಸ್ ಅಭಿಮಾನಿ ದೇವರುಗಳ ಆಶೀರ್ವಾದ ಈ ಹೊಸ ಕರ್ನಾಟಕ ಕ್ರಶ್ ಲಾಯರ್ ಜಗದೀಶ್ ಆಗಿದ್ದಾನೆ. ಮುಂದುವರೆದು, ನಿಮ್ಮ ಪ್ರತಿ ಒಂದು ಚಪ್ಪಾಳೆ, ಸಂದೇಶ, ನಿಮ್ಮ ಆಶೀರ್ವಾದ ನನ್ನ ಈ ಬಿಗ್ಬಾಸ್ ಪಯಣ ಯಶಸ್ಸು, ಅದು ನೀವು ಇಟ್ಟ ಈ ನಂಬಿಕೆ. ಮತ್ತೊಮ್ಮೆ ಕೋಟಿ ಕೋಟಿ ನಮನ. ಸಾರ್ಥಕ ಆಯಿತು, ನನ್ನ ಈ ಹುಟ್ಟು, ಈ ಪ್ರೀತಿ, ನನ್ನ ಗೆಲುವಿಗೆ ನೀವು ಕೊಟ್ಟ ಆ ಒಡನಾಟ, ನನ್ನ ಬಳಿ ಪದಗಳು ಕಡಿಮೆ, ವಿಶ್ಲೇಷಣೆ ಮಾಡಲು ಎಂದಿದ್ದಾರೆ.
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ. ರಂಜಿತ್, ಮಾನಸ ಮತ್ತು ಎಲ್ಲರೂ ನನ್ನನ್ನು ಕ್ಷಮಿಸಿ, ನೀವೆಲ್ಲ ತುಂಬಾ ಚಿಕ್ಕ ವಯಸ್ಸಿನಲ್ಲೇ ಅಧ್ಭುತ ಕಲಾವಿದರು, ನಾನು ನಿಮ್ಮ ಜೊತೆಯಲ್ಲಿ ಒಬ್ಬನಾಗಿ ನಗಲು ಪ್ರಯತ್ನ ಪಟ್ಟೆ ಅಷ್ಟೇ, ಈ ನಿಟ್ಟಿನಲ್ಲಿ ಕೆಲವು ತಪ್ಪುಗಳು ನನ್ನಿಂದ ಆಗಿದೆ, ಅದು ನಟನೆ ಅಥವಾ ಮನರಂಜನೆಯ ಒಂದು ಭಾಗವಷ್ಟೇ, ವೈಯಕ್ತಿಕ ದ್ವೇಷ ಯಾವುದೂ ಇಲ್ಲ ಎಂದು ಹೇಳಿದ್ದಾರೆ.
ಬಿಗ್ಬಾಸ್ (Bigg Boss) ಮನೆಯಲ್ಲಿ ದೊಡ್ಡ ಜಗಳಕ್ಕೆ ಕಾರಣವಾಗುವುದು ಲಾಯರ್ ಜಗದೀಶ್ ಅವರು ಹಂಸ ಬಗ್ಗೆ ಬಳಸಿದ ಪದ. ಈ ಒಂದು ಪದದಿಂದ ಮನೆಯಲ್ಲಿ ದೊಡ್ಡ ಜಗಳ ನಡೆದಿದೆ. ಅಷ್ಟೇ ಅಲ್ಲದೇ ಈ ಘಟನೆ ವೇಳೆ ತಳ್ಳಾಟ, ಎಳೆದಾಟ ನಡೆದಿದೆ. ಬಿಗ್ಬಾಸ್ ಎಲ್ಲರನ್ನೂ ಕೂರಲು ಹೇಳಿ ಘಟನೆ ಬಗ್ಗೆ ವಿಚಾರಿಸಿದ್ದಾರೆ. ಕ್ಯಾಪ್ಟನ್ ಸೇರಿ ಮನೆಯ ಸದಸ್ಯರ ಅಭಿಪ್ರಾಯ ಪಡೆದ ಬಳಿಕ ಬಿಗ್ಬಾಸ್ ಜಗದೀಶ್ ಹಾಗೂ ರಂಜಿತ್ ಅವರನ್ನು ಮನೆಯನ್ನು ಬಿಟ್ಟು ಹೊರಗೆ ಹೋಗುವಂತೆ ಆದೇಶಿಸಿದ್ದಾರೆ.