More

    ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ : ಜಗದೀಶ್ ಶೆಟ್ಟರ್

    ಬೆಂಗಳೂರು: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.  ಈ ಹೊಸ್ತಿಲಿಲ್ಲ ರಾಜೀನಾಮೆ ಪತ್ರ ವೈರಲ್​​ ಆಗಿದೆ.ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ : ಜಗದೀಶ್ ಶೆಟ್ಟರ್

    ರಾಜೀನಾಮೆ ಪತ್ರದಲ್ಲಿ ಏನಿದೆ?: ಕರ್ನಾಟಕ ವಿಧಾನಪರಿಷತ್ತು ಸದಸ್ಯತ್ವಕ್ಕೆ ಈ ದಿನ ನಾನು ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕಾಗಿ ವಿನಂತಿ. ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಬರೆದಿದ್ದಾರೆ.

    ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

    ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿ, ವೈ ವಿಜಯೇಂದ್ರ, ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಮಲಗಿದ್ದಲ್ಲೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಡಿಡಿಪಿಯು ಕೃಷ್ಣಪ್ಪ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts