More

    ಲೋಕಸಭೆ ಚುನಾವಣೆ; ಶೆಟ್ಟರ್​ರನ್ನು ಬಿಜೆಪಿಗೆ ವಾಪಸ್​ ಕರೆತರಲು ಮುಂದಾದ ನಾಯಕರು

    ಬೆಂಗಳೂರು: ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್​ ಕೈತಪ್ಪಿದಕ್ಕೆ ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರನ್ನು ವಾಪಸ್​ ಮಾತೃಪಕ್ಷಕ್ಕೆ ಕರೆದುಕೊಂಡು ಬರುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.

    ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟಕದ ನಾಯಕರಿಗೆ ಹೈಕಮಾಂಡ್​ ಟಾಸ್ಕ್​ ನೀಡಿದ್ದು, ಈ ಹಿನ್ನೆಲೆಯಲ್ಲಿ ಕೆಲ ನಾಯಕರು ಶೆಟ್ಟರ್​ ಮನವೊಲಿಕೆ ಮುಂದಾಗಿದ್ದಾರೆ. ಇದಲ್ಲದೆ ಕೆಲ ನಾಯಕರು ಅವರಿಗೆ ಮುಂಬರುವ ಲೋಕಸಭೆ ಚುನಾವಣೆಗೆ ಬೆಳಗಾವಿ ಕ್ಷೇತ್ರದ ಟಿಕೆಟ್​ ಆಫರ್ ನೀಡಿದ್ದಾರೆ ಎಂದು ವರದಿಯಾಗಿದೆ.

    ಇದನ್ನೂ ಓದಿ: ‘ಕೆಡಿ’ ಲೋಕಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್​ ಬೆಡಗಿ

    ಕಳೆದ ವಿಧಾನಸಭಾ ಚುನಾವಣೆ ವೇಳೆ ಕೊನೆಯ ಕ್ಷಣದಲ್ಲಿ ಟಿಕೆಟ್ ತಪ್ಪಿಸಿದ್ದರಿಂದ ಕೋಪಗೊಂಡ ಶೆಟ್ಟರ್ ಅವರು ತಮಗೆ ಅನ್ಯಾಯವಾಗಿದೆ ಎಂದು ಆಕ್ರೋಶಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡರೂ ಸಹ ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಶೆಟ್ಟರ್ ವರ್ಚಸ್ಸು ಸಹ ಒಂದು ರೀತಿಯಲ್ಲಿ ಕಾರಣವಾಗಿತ್ತು.

    ಇದನ್ನೂ ಮನಗಂಡಿರುವ ಬಿಜೆಪಿ ಹೈಕಮಾಂಡ್​ ಶೆಟ್ಟರ್​ ಅವರನ್ನು ಮನವೊಲಿಸಿ ವಾಪಸ್​ ಬಿಜೆಪಿಗೆ ಕರೆತರುವಂತೆ ರಾಜ್ಯ ನಾಯಕರಿಗೆ ಸೂಚಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಹೀಗಾಗಿ, ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಕರೆತಂದರೆ ಅದು ಅನುಕೂಲವಾಗಬಹುದು ಎಂಬ ಲೆಕ್ಕಾಚಾರವನ್ನು ಪಕ್ಷದ ಹಿರಿಯ ನಾಯಕರು ಹಾಕಿಕೊಂಡಿದ್ದು, ಇದು ಕೈಗೂಡಲಿದೆಯಾ ಎಂದು ಕಾದು ನೋಡಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts